ಬ್ರೇಕಿಂಗ್ ನ್ಯೂಸ್
18-03-21 05:37 pm Mangalore Correspondent ಕರಾವಳಿ
ಮಂಗಳೂರು, ಮಾ.18 : ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ಕಂಬಳಕ್ಕೂ ತಲಾ ಐದು ಲಕ್ಷ ಸಹಾಯ ಧನ ನೀಡಲು ಪ್ರವಾಸೋದ್ಯಮ ಇಲಾಖೆ ತೀರ್ಮಾನಿಸಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ಒಂದು ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.


ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ. ಯೋಗೇಶ್ವರ್, ಇತ್ತೀಚೆಗೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ ರೂ.5 ಲಕ್ಷ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಂಬಳಕ್ಕೆ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಸಚಿವ ಯೋಗೀಶ್ವರ್ ಹೇಳಿದ್ದರು. ಪ್ರತಿ ಕಂಬಳಕ್ಕೆ ರೂ. 5 ಲಕ್ಷಗಳನ್ನು ಸಹಾಯಧನ ರೂಪದಲ್ಲಿ ನೀಡುವುದಾಗಿ ಹೇಳಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5 ಲಕ್ಷಗಳಂತೆ ರೂ.50 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5 ಲಕ್ಷಗಳಂತೆ ರೂ.50 ಲಕ್ಷಗಳನ್ನು ಹೀಗೆ ಒಟ್ಟು ಒಂದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು. ಆದರೆ, ಈ ಸಹಾಯಧನ ಪಡೆಯಲು ಷರತ್ತು ವಿಧಿಸಲಾಗಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಕಂಬಳವನ್ನು ಆಯ್ಕೆ ಮಾಡತಕ್ಕದ್ದು. ಆಯೋಜಿಸಲಾಗುವ ಕಂಬಳವು ಅತ್ಯಧಿಕ ಸಂಖ್ಯೆಯಲ್ಲಿ ಆಕರ್ಷಿಸುವಂತಿರಬೇಕು. ಕಂಬಳವನ್ನು ಒಂದು ಗುಂಪು ಅಥವಾ ತಂಡದಿಂದ ಆಯೋಜಿಸಬೇಕು. ಸದರಿ ತಂಡವು ಒಂದು ಕುಟುಂಬಕ್ಕೆ ಸೇರಿದಂತಿರಬಾರದು. ಮಂಜೂರು ಮಾಡಿದ ಹಣವನ್ನು ಬಳಕೆ ಮಾಡಿದ್ದಕ್ಕೆ ಲೆಕ್ಕ ಪರಿಶೋಧಕರಿಂದ ಲೆಕ್ಕಪಟ್ಟಿಯನ್ನು ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Mangalore Backing Kambala 5 lakhs to every kambala event from government declared Karnataka Tourism Minister C. P. Yogeshwar.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm