ಬ್ರೇಕಿಂಗ್ ನ್ಯೂಸ್
18-03-21 11:27 pm Mangaluru correspondent ಕರಾವಳಿ
ಮಂಗಳೂರು, ಮಾ.18 : ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಸತ್ರ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ.
ಕೆಮ್ರಾಲ್ ಮುಲ್ಯೊಟ್ಟು ನಿವಾಸಿ ದಿನೇಶ್ ಶೆಟ್ಟಿ (41) ಶಿಕ್ಷೆಗೊಳಗಾದ ಆರೋಪಿ.
ಆರೋಪಿ ದಿನೇಶ್ ತನ್ನ ಪರಿಚಯದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ 2018ರ ಡಿಸೆಂಬರ್ 23ರ ರಾತ್ರಿ ಮತ್ತು 2019ರ ಜನವರಿ 6ರಂದು ಮಧ್ಯಾಹ್ನ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ಇದಾದ ಎರಡು ತಿಂಗಳ ನಂತರ ಯುವತಿ ಅನಾರೋಗ್ಯಕ್ಕೆ ಈಡಾಗಿದ್ದಾಳೆ. ಪೋಷಕರ ಜತೆ ವೈದ್ಯರ ಬಳಿ ತೆರಳಿ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿತ್ತು. ಪೋಷಕರು ಬಾಲಕಿಯನ್ನು ಈ ಬಗ್ಗೆ ವಿಚಾರಿಸಿದಾಗ ದಿನೇಶ್ ಶೆಟ್ಟಿ ಅತ್ಯಾಚಾರಗೈದಿರುವ ವಿಷಯ ಬಯಲಿಗೆ ಬಂದಿತ್ತು.
ಅಪ್ರಾಪ್ತ ಬಾಲಕಿ ನೀಡಿದ ದೂರಿನ ಆಧಾರದಲ್ಲಿ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿತ್ತು. ಮಗುವಿನ ಡಿಎನ್ಎ ಪರೀಕ್ಷೆಯಲ್ಲೂ ಆರೋಪ ದೃಢಪಟ್ಟಿತ್ತು.
ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಪ್ರಕರಣವನ್ನು ಸಮಗ್ರ ವಿಚಾರಣೆ ನಡೆಸಿದ ನಂತರ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಸಾಕ್ಷಿ ಹೇಳಿದ್ದು, 12 ದಾಖಲೆಗಳನ್ನು ಪರಿಗಣಿಸಲಾಗಿದೆ.
ಆರೋಪಿಗೆ ಐಪಿಸಿ 376 ಪ್ರಕರಣದಡಿ 7 ವರ್ಷ ಕಠಿಣ ಸಜೆ, 5ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 1 ತಿಂಗಳ ಕಠಿಣ ಸಜೆ, ಪೋಕ್ಸೋ ಪ್ರಕರಣದಡಿ 10 ವರ್ಷ ಕಠಿಣ ಸಜೆ ಮತ್ತು 50 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 2 ತಿಂಗಳು ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ. ಆರೋಪಿಯ ಬಂಧನದ ನಂತರ 2 ವರ್ಷ ನ್ಯಾಯಾಂಗ ಬಂಧನದಲ್ಲಿದ್ದು, ಈ ಅವಧಿ ಶಿಕ್ಷೆಯಲ್ಲಿ ಕಡಿತಗೊಳ್ಳಲಿದೆ. ದಂಡದ ಮೊತ್ತದಲ್ಲಿ 45 ಸಾವಿರ ರೂ.ವನ್ನು ನೊಂದ ಬಾಲಕಿಗೆ ನೀಡಬೇಕು. ಕಾನೂನು ಸೇವಾ ಪ್ರಾಧಿಕಾರದಿಂದಲೂ ಬಾಲಕಿ ಪರಿಹಾರ ಪಡೆಯಲು ಅರ್ಹರು ಎಂದು ಆದೇಶಿಸಲಾಗಿದೆ.
ಆರೋಪಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು ಮದುವೆಯಾಗಿ, ಇಬ್ಬರು ಮಕ್ಕಳು ಇದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಮೂಲ್ಕಿ ಇನ್ಸ್ಪೆಕ್ಟರ್ ಆಗಿದ್ದ ಪಿ.ಎಂ. ಸಿದ್ದರಾಜು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
Mangalore Girl cheated in the name of marriage and raped court orders 10 years imprisonment to boy. The accused has been identified as Dinesh Shetty.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm