ಬ್ರೇಕಿಂಗ್ ನ್ಯೂಸ್
21-03-21 09:01 pm Mangaluru correspondent ಕರಾವಳಿ
ಮಂಗಳೂರು, ಮಾ.21 : ಬಿಜೆಪಿ ಶಾಸಕರ ಅಶ್ಲೀಲ ಸಿಡಿಯ ಬಗ್ಗೆ ಸಮಗ್ರ ತನಿಖೆ ಮಾಡಲು ಎಸ್ಐಟಿ ರಚಿಸಿದ ನಾಚಿಕೆಗೇಡು ಬಿಜೆಪಿ ಸರಕಾರಕ್ಕೆ ತನ್ನದೇ ಪಕ್ಷದ ಒಬ್ಬ ಕಾರ್ಯಕರ್ತನ ಭೀಕರ ಕೊಲೆಯ ಹಿಂದಿರುವ ಸತ್ಯವನ್ನು ಬಯಲಿಗೆಳೆಯಲು, ಸಮಗ್ರ ತನಿಖೆ ನಡೆಸಲು ಎಸ್ಐಟಿ ರಚಿಸಲು ಯಾಕೆ ಅಸಾಧ್ಯ..? ಎಂದು ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಪ್ರಶ್ನೆ ಮಾಡಿದ್ದಾರೆ.
ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ಪ್ರಕರಣಕ್ಕೆ ಐದು ವರುಷ ಸಂದ ಈ ದಿನದಂದು ದೇಶಪ್ರೇಮಿ ಸಂಘಟನೆಗಳ ಒಕ್ಕೂಟ ನಡೆಸಿದ ಮೆರವಣೆಗೆ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅಕ್ರಮಗಳ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ ಕಾರಣಕ್ಕಾಗಿಯೇ ಕೊಲೆಗೀಡಾಗಿದ್ದಾರೆ. ಪೊಲೀಸ್ ಇಲಾಖೆ ಕೊಲೆಗಟುಕರನ್ನಷ್ಟೇ ಬಂಧಿಸಿದ್ದಾರೆ ಹೊರತು ಕೊಲೆಯ ಹಿಂದಿರುವ ಸೂತ್ರಧಾರಿಗಳನ್ನು ಬಂಧಿಸೋದಾಗಲಿ ಅಥವಾ ಪ್ರಕರಣವನ್ನು ಸಂಪೂರ್ಣ ಭೇದಿಸಲು ಈವರೆಗೂ ಸಾಧ್ಯವಾಗಿಲ್ಲ. ಪ್ರಕರಣದ ಸಮಗ್ರ ತನಿಖೆ ನಡೆಯಬೇಕು. ಹಾಗಾಗಿ ಉನ್ನತ ಮಟ್ಟದ ತನಿಖೆಗಾಗಿ ಎಸ್ಐಟಿ ನೇಮಕ ಆಗಬೇಕು. ಅದು ಆಗುವವರೆಗೆ ಬಾಳಿಗಾ ಸಾವಿನ ನ್ಯಾಯಕ್ಕಾಗಿ ನಡೆಯುವ ಹೋರಾಟ ಎಂದೂ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ಈ ವೇಳೆ ಡಿವೈಎಫ್ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಡಿಎಸ್ಎಸ್ ರಾಜ್ಯ ಮುಖಂಡರಾದ ಎಂ. ದೇವದಾಸ್, ಮನೋವೈದ್ಯ ಡಾ. ಪಿ.ವಿ. ಭಂಡಾರಿ , ಮಂಜುಳಾ ನಾಯಕ್, ಮಾಜಿ ಕಾರ್ಪೊರೇಟರ್ ಪ್ರಕಾಶ್ ಸಾಲ್ಯಾನ್, ಸುನಿಲ್ ಬಜಿಲಕೇರಿ, ಸುಧಾಕರ ಶೆಣೈ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಎಸ್ಎಸ್ ಜಿಲ್ಲಾ ಮುಖಂಡರಾದ ರಘು ಎಕ್ಕಾರ್, ಜೆರಾಲ್ಡ್ ಟವರ್, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್ , ಪ್ರಸಾದ್ ಬಜಿಲಕೇರಿ, ಡಾ. ಕೃಷ್ಣಪ್ಪ ಕೊಂಚಾಡಿ, ಗುಲಾಬಿ ಬಿಳಿಮಲೆ, ಆಶಾ ನಾಯಕ್, ಎರಿಕ್ ಲೋಬೋ, ಶ್ಯಾಮ್ ಸುಂದರ್ ರಾವ್, ವಾಸುದೇವ ಉಚ್ಚಿಲ, ಪ್ರಭಾಕರ ಕಾಪಿಕಾಡ್, ಬಾಳಿಗಾ ಅವರ ಸಹೋದರಿ ಅನುರಾಧ ಬಾಳಿಗ, ಹರ್ಷ ಬಾಳಿಗ ಉಪಸ್ಥಿತರಿದ್ದರು.
ಸಭೆಯನ್ನು ದೇಶಪ್ರೇಮಿ ಸಂಘಟನೆಗಳ ಸಂಚಾಲಕ ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್ ಸ್ವಾಗತಿಸಿ ನಿರ್ವಹಿಸಿದರು. ವೆಂಕಟರಮಣ ದೇವಳದ ಮುಂಭಾಗದಲ್ಲಿ ಬಾಳಿಗಾ ಸಹೋದರಿಯರು ಪ್ರಾರ್ಥಿಸುವ ಮೂಲಕ ಮೆರವಣಿಗೆ ಪ್ರಾರಂಭಗೊಂಡು ಬಾಳಿಗ ಮನೆ ವರೆಗೆ ನಡೆಯಿತು.
SIT probe should be initiated in connection to the Murder of Vinayak Baliga said Professor Narendra Nayak during the mark the 5th death anniversary of the RTI activist in Mangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm