ಬ್ರೇಕಿಂಗ್ ನ್ಯೂಸ್
21-08-20 02:05 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 21: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ದೇಶ - ವಿದೇಶದಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಆದಿತ್ಯ ರಾವ್ ಈತನಿಗೂ ರೋಲ್ ಮಾಡೆಲ್ ಆಗಿದ್ನಂತೆ. ಅದೇ ಕಾರಣಕ್ಕೆ ಆತ ಮಂಗಳೂರು ಏರ್ಪೋರ್ಟಿಗೆ ಬಾಂಬ್ ಇಟ್ಟಿರುವುದಾಗಿ ಹೇಳಿ ಈಗ ಜೈಲು ಕಂಬಿ ಎಣಿಸಿದ್ದಾನೆ. ಹೌದು.. ಎರಡು ದಿನಗಳ ಹಿಂದೆ ಏರ್ಪೋರ್ಟಿಗೆ ಬಾಂಬ್ ಕರೆ ಮಾಡಿ ಸಿಕ್ಕಿಬಿದ್ದ ಕಾರ್ಕಳದ ವಸಂತ ಶೇರಿಗಾರ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ, ಪೊಲೀಸರಿಗೇ ಅಚ್ಚರಿಯಾಗಿತ್ತು.
ಆರೋಪಿ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಟಿ ಕರೆದ ಮಂಗಳೂರು ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್, ವಸಂತ ಶೇರಿಗಾರನ ಬಗ್ಗೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ. ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಸಿಸಿಬಿ ಪೊಲೀಸರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿವಾಸಿ ವಸಂತ್ ಶೇರಿಗಾರ (33) ಎಂಬವನನ್ನು ಬಂಧಿಸಿದ್ದು ಆದಿತ್ಯ ರಾವ್ ರೀತಿಯಲ್ಲಿ ಪ್ರಚಾರ ಗಿಟ್ಟಿಸುವುದಕ್ಕಾಗಿ ಬಾಂಬ್ ಇಟ್ಟಿದ್ದಾಗಿ ಹುಸಿ ಕರೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.
ಆಗಸ್ಟ್ 19ರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ ರಾವ್ ಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ಬಜ್ಪೆ ಏರ್ಪೋರ್ಟ್ ಗೆ ಬಾಂಬ್ ಇಟ್ಟಿದ್ದಾಗಿ ಹೇಳಿದ್ದ. ಅವರು ಕೂಡಲೇ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಇದರಿಂದ ಗಾಬರಿಗೊಂಡ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ತಿಳಿಸಿದ್ದು ತಪಾಸಣೆ ಏರ್ಪಡಿಸಿದ್ದರು. ಇದೇ ವೇಳೆ, ಆರೋಪಿಯ ನಂಬರ್ ಟ್ರೇಸ್ ಮಾಡಿದ್ದು ಕಾರ್ಕಳದ ವಸಂತಕೃಷ್ಣ ಶೇರಿಗಾರ್ ಎಂದು ತೋರಿಸಿತ್ತು. ವಿಮಾನ ನಿಲ್ದಾಣ ಆಸುಪಾಸಿನಲ್ಲಿ ತಪಾಸಣೆ ನಡೆಸಿದಾಗ ಬಾಂಬ್ ಕರೆ ಹುಸಿಯೆಂದು ತಿಳಿದುಬಂದಿತ್ತು. ಅಲ್ಲದೆ, ಮಂಗಳೂರು ಪೊಲೀಸರು ನೇರವಾಗಿ ಕಾರ್ಕಳಕ್ಕೆ ತೆರಳಿ, ಸದ್ದಿಲ್ಲದ ಹಾಗೆ ಆರೋಪಿಯನ್ನು ಎತ್ತಾಕ್ಕೊಂಡು ಬಂದಿದ್ದಾರೆ. ವಿಚಾರಣೆ ನಡೆಸಿದಾಗ ಬಾಂಬ್ ಕರೆಯ ನಿಜ ವಿಚಾರ ಬಯಲಾಗಿದೆ.
ಎಂಟನೇ ತರಗತಿ ಓದಿದ್ದ ವಸಂತ, ಬೆಂಗಳೂರಿನಲ್ಲಿ ಹೊಟೇಲಿನಲ್ಲಿ ಕೆಲಸಕ್ಕಿದ್ದ. ಲಾಕ್ ಡೌನ್ ಬಳಿಕ ಊರಿಗೆ ಬಂದಿದ್ದು ಮೊಬೈಲ್ ನಲ್ಲಿ ಹೆಚ್ಚು ಆಕ್ಟೀವ್ ಆಗಿದ್ದ. ಮನೆಯಲ್ಲಿ ಗದ್ದೆ ಕೆಲಸವನ್ನೂ ಮಾಡ್ತಿದ್ದ. ಇದೇ ವೇಳೆ ಗೂಗಲ್ನಲ್ಲಿ ಮಂಗಳೂರು ಏರ್ ಪೋರ್ಟ್ ಬಗ್ಗೆ ಸರ್ಚ್ ಮಾಡಿದಾಗ, ಮಾಜಿ ನಿರ್ದೇಶಕ ವಾಸುದೇವ ರಾವ್ ನಂಬರ್ ಸಿಕ್ಕಿತ್ತು. ಫೋನ್ ಕರೆ ಮಾಡಿ, ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಕಳೆದ ಜನವರಿ ತಿಂಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇರಿಸಿ ಬಂಧಿತನಾಗಿದ್ದ ಆದಿತ್ಯ ರಾವ್ ಒಂದೇ ದಿನ ರಾತ್ರಿ ಬೆಳಗಾಗುವುದರಲ್ಲಿ ದೇಶ - ವಿದೇಶದಲ್ಲಿ ಪ್ರಚಾರ ಪಡೆದಿದ್ದ. ಅದೇ ಪ್ರಕರಣದ ಬೆನ್ನು ಹತ್ತಿದ ವಸಂತ, ಆದಿತ್ಯನ ರೀತಿಯಲ್ಲಿ ದೇಶಾದ್ಯಂತ ಪ್ರಚಾರ ಗಿಟ್ಟಿಸಬೇಕೆಂದು ಈ ಕೆಲಸ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಸಂತ್ ವಿರುದ್ಧ ಗಂಭೀರ ಕಾಯ್ದೆಗಳಡಿ ಪ್ರಕರಣ ದಾಖಲಿಸಿದ್ದೇವೆ. ಆತನ ಮಾನಸಿಕ ಆರೋಗ್ಯದ ಬಗ್ಗೆ ಮೆಡಿಕಲ್ ರಿಪೋರ್ಟ್ ಬರಬೇಕು. ಇದೊಂದು ಗಂಭೀರ ಪ್ರಕರಣವಾಗಿದ್ದು, ಹೆಚ್ಚಿನ ತನಿಖೆ ನಡೆಸುವುದಾಗಿ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ತಿಳಿಸಿದ್ದಾರೆ.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm