ಬ್ರೇಕಿಂಗ್ ನ್ಯೂಸ್
24-03-21 08:18 pm Mangaluru correspondent ಕರಾವಳಿ
ಮಂಗಳೂರು, ಮಾ.24 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರ ಘಟಕದ ವತಿಯಿಂದ ಭಗತ್ ಸಿಂಗ್, ರಾಜಗುರು, ಸುಖದೇವ್ ಇವರ ಬಲಿದಾನ ದಿನದ ಸ್ಮರಣೆಯಾಗಿ ಸಾರ್ವಜನಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉರ್ವಾಸ್ಟೋರ್ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ವಕ್ತಾರರಾಗಿದ್ದ ದಿಶಾ ಭಾರತ ಇದರ ಟ್ರಸ್ಟಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪದ್ಮಾರ್, ಭಾರತೀಯತೆಯನ್ನು ಉಳಿಸಲು ಪ್ರಯತ್ನಿಸಿದ ಸಾವಿರಾರು ಬಲಿದಾನಿಗಳು ಈ ಪುಣ್ಯಭೂಮಿಯಲ್ಲಿ ಆಗಿಹೋಗಿದ್ದಾರೆ. ತ್ಯಾಗ, ಬಲಿದಾನ ಮತ್ತು ಸೇವೆ ಭಾರತದ ಪರಂಪರೆಯಲ್ಲಿ ಅಡಕವಾಗಿದ್ದು ಇದನ್ನು ಯುವ ಸಮುದಾಯ ಮುಂದುವರಿಸುವ ಅಗತ್ಯತೆ ಇದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪೊಲೀಸ್ ಅಧೀಕ್ಷಕರಾದ ಪಿ ಹರಿಶ್ಚಂದ್ರ ಆಗಮಿಸಿ , ಬಲಿದಾನಿಗಳ ಆದರ್ಶಗಳನ್ನು ಯುವ ಜನತೆ ಜೀವನದಲ್ಲಿ ಮೈಗೂಡಿಸಬೇಕು ಎಂದು ಹೇಳಿದರು. ಅ ಭಾ ವಿ ಪ ಮಂಗಳೂರು ಮಹಾನಗರದ ಅಧ್ಯಕ್ಷೆ ಶ್ರೀಮತಿ ಭಾರತಿ ಪ್ರಭು ಹಾಗೂ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಸಭೆಯ ಮೊದಲು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ನೃತ್ಯ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಸುಮಂಗಲಾ ರಾವ್, ಹಿರಿಯ ಕಾರ್ಯಕರ್ತರಾದ ಚ.ನ ಶಂಕರರಾವ್, ಸರಸ್ವತಿ ರಾವ್, ರಾಘವೇಂದ್ರ ಹೊಳ್ಳ, ಉದ್ಯಮಿ ಸಂಜಯ್ ಪ್ರಭು, ಸುಜಿತ್ ಪ್ರತಾಪ್, ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಸಂದೇಶ್ ರೈ ಮಜಕ್ಕಾರ್, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ನಗರ ಸಹ ಕಾರ್ಯದರ್ಶಿಗಳಾದ ಶ್ರೇಯಸ್ ರೈ, ಕಿರಣ್, ಆತ್ಮಿಕ, ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀಲಕ್ಷ್ಮೀ ಮಠದಮೂಲೆ, ಕಾರ್ಯಕರ್ತರಾದ ಆದಿತ್ಯ ಶೆಟ್ಟಿ, ಆದರ್ಶ್ ಉಪ್ಪಾರ, ಪ್ರಣಮ್ ಶೆಟ್ಟಿ, ಭವನೀಶ್ ಶೆಟ್ಟಿ ಹಾಗೂ ಅನೇಕ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Martyr's Day 2021 Bhagat Singh death anniversary program was held by ABVP in Mangalore
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm