ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.

ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.

ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm