ಬ್ರೇಕಿಂಗ್ ನ್ಯೂಸ್
28-03-21 01:00 pm Mangalore Correspondent ಕರಾವಳಿ
ಮಂಗಳೂರು, ಮಾ.28: ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಸಾಕ್ಷಿ ನಾಶ ಮಾಡುವ ಪ್ರಯತ್ನದಲ್ಲಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐ ಟಿಯನ್ನು ಜಾರಕಿಹೊಳಿ ತನ್ನ ಕೈಗೊಂಬೆಯಾಗಿಸಿದ್ದಾರೆ. ಸಾಕ್ಷಿ ನಾಶ ಮಾಡುತ್ತಿರುವ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಮಿಥುನ್ ರೈ, ಎಸ್ಐಟಿ ಪ್ರಾಯೋಜಕತ್ವದಲ್ಲಿ ಸಂತ್ರಸ್ತೆಯ ಕುಟುಂಬಸ್ಥರು ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಕ್ಷಣೆಗೆ ಎಸ್ ಐ ಟಿ ಯತ್ನಿಸುತ್ತಿದೆ. ರಮೇಶ್ ಜಾರಕಿಹೊಳಿ ಬಂಧಿಸುವವರೆಗೂ ಕಾಂಗ್ರೆಸ್ ಹೋರಾಟ ನಡೆಸಲಿದೆ. ಸೋಮವಾರ ಬೆಂಗಳೂರಿನ ಎಸ್ ಐ ಟಿ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

ಸಿ ಡಿ ಯಲ್ಲಿ ಇರುವಂತಹ ನಾಯಕ , ಪಾತ್ರಧಾರಿ, ಮಹಾನ್ ಗಣ್ಯ ವ್ಯಕ್ತಿ ಯಾರು ? ಎಂಬುದು ಎಲ್ಲರಿಗೂ ಗೊತ್ತು. ಇವರ ವಿರುದ್ಧ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಆದರೂ ಪೊಲೀಸರು ಬಂಧಿಸುವ ಕೆಲಸ ಮಾಡುತ್ತಿಲ್ಲ. ಆದರೆ, ಆರೋಪಿಯೇ ಸಿಡಿ ಪ್ರಕರಣದ ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಉಪ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.


ಎಸ್ಐಟಿ ಪ್ರಾಯೋಜಕತ್ವದಲ್ಲಿ ಸಂತ್ರಸ್ತೆಯ ಕುಟುಂಬಸ್ಥರು ಮಾಧ್ಯಮ ಗಳಿಗೆ ಹೇಳಿಕೆ ನೀಡಿದ್ದಾರೆ. 25 ದಿನಗಳ ನಂತರ ಸಂತ್ರಸ್ತೆಯ ಕುಟುಂಬಸ್ಥರು ಎಸ್ಐಟಿ ಮುಂದೆ ಬಂದದ್ದಾದರೂ ಹೇಗೆ ಮತ್ತು ಯಾಕೆ ಎಂದು ಪ್ರಶ್ನೆ ಮಾಡಿದ ಮಿಥುನ್ ರೈ, ರಮೇಶ್ ಜಾರಕಿಹೊಳಿ ತಮ್ಮ ಪ್ರಭಾವ ಬಳಸಿ ಬೆದರಿಕೆ ಹಾಕಿ ಸಂತ್ರಸ್ತೆ ಕುಟುಂಬಸ್ಥರಿಂದ ಹೇಳಿಕೆ ನೀಡಿಸಿದ್ದಾರೆ. ಇಡೀ ಪ್ರಕರಣವನ್ನು ತಿರುಚುವ ಪ್ರಯತ್ನವನ್ನು ಎಸ್ ಐ ಟಿ ತಂಡ ಮಾಡುತ್ತಿದೆ. ಇವರ ತನಿಖೆಯ ಹಾದಿಯೇ ತಪ್ಪುತ್ತಿದೆ. ಇಡೀ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು. ಅಲ್ಲೀ ವರೆಗೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ.
Video:
SIT is Ramesh Jarkiholis puppet alleges Congress leader Mithun Rai in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm