ಬ್ರೇಕಿಂಗ್ ನ್ಯೂಸ್
29-03-21 12:22 pm Mangalore Correspondent ಕರಾವಳಿ
ಮಂಗಳೂರು, ಮಾ.29: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರನೊಬ್ಬ ರಸ್ತೆ ದಾಟುತ್ತಿದ್ದ ಅಮಾಯಕ ವ್ಯಕ್ತಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣವಾದ ಘಟನೆ ನಗರದ ಕದ್ರಿ ಪೊಲೀಸ್ ಠಾಣೆ ಮುಂಭಾಗದಲ್ಲಿ ನಡೆದಿದೆ.
ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಲೇಡಿಹಿಲ್ ನಿವಾಸಿ ಬಿಎಸ್ಸೆನ್ನೆಲ್ ನಿವೃತ್ತ ಉದ್ಯೋಗಿ ಆನಂದ (62) ಎಂದು ಗುರುತಿಸಲಾಗಿದೆ. ನಿವೃತ್ತಿ ಬಳಿಕ ಡೈರೆಕ್ಟ್ ಸೆಲ್ಲಿಂಗ್ ಡುಕ್ಸ್ ಎಂಚ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ ನಿನ್ನೆ ಸಂಜೆ ಉಡುಪಿಯಲ್ಲಿ ಮೀಟಿಂಗ್ ಮುಗಿಸ್ಕೊಂಡು ಬರುತ್ತಿದ್ದರು. ಕೆಪಿಟಿ ರಸ್ತೆಯಿಂದ ಕದ್ರಿ ಠಾಣೆ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನಗರ ಭಾಗದಿಂದ ಅತಿ ವೇಗವಾಗಿ ಬಂದ ಕಾರು ನೇರವಾಗಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ವ್ಯಕ್ತಿ ಹದಿನೈದು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಾರು ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.
ಕೂಡಲೇ ಅಲ್ಲಿ ಸಾರ್ವಜನಿಕರು ಸೇರಿದ್ದು, ಕದ್ರಿ ಠಾಣೆ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನೆಯ ದೃಶ್ಯಾವಳಿ ಬಸ್ ನಿಲ್ದಾಣದ ಬಳಿಯಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಕಾರು ಚಾಲಕನ ಅವಾಂತರಕ್ಕೆ ಸಾಕ್ಷಿಯಾಗಿತ್ತು. ಕೂಡಲೇ ಪೊಲೀಸರು ಆರೋಪಿಯನ್ನು ಸೆರೆಹಿಡಿದಿದ್ದಾರೆ. ಆರೋಪಿ ಮಂಗಳೂರಿನಲ್ಲಿ ಪಿಡಬ್ಲ್ಯುಡಿ ಇಲಾಖೆಯ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಶಣ್ಮುಗಂ ಎಂಬಾತನಾಗಿದ್ದು, ಕುಡಿದ ಅಮಲಿನಲ್ಲಿ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿಕೊಂಡು ಬಂದಿದ್ದೇ ಘಟನೆಗೆ ಕಾರಣವಾಗಿತ್ತು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಕಮಿಷನರ್ ಶಶಿಕುಮಾರ್, ಆರೋಪಿ ವಿರುದ್ಧ ಕೊಲೆಗೆ ಸಮಾನವಾದ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದ್ದಾರೆ. ಸಾಮಾನ್ಯವಾಗಿ ಈ ರೀತಿಯ ಪ್ರಕರಣಗಳಿಗೆ 304 ಎ ಸೆಕ್ಷನ್ ಹಾಕಲಾಗುವುದು. ಈತ ಕುಡಿದು ಕಾರು ಚಲಾಯಿಸಿದ ಅಮಾಯಕನ ಸಾವಿಗೆ ಕಾರಣವಾಗಿದ್ದರಿಂದ ಸೆಕ್ಷನ್ 304 ವಿಧಿಸಲಾಗಿದೆ. ಮೃತ ವ್ಯಕ್ತಿಯ ಪತ್ನಿಯ ದೂರಿನಂತೆ ಆರೋಪಿ ವಿರುದ್ಧ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಸೆಕ್ಷನ್ 304 ಪ್ರಕಾರ ಆರೋಪಿಗೆ ಜೀವಾವಧಿ ಅಥವಾ ಹತ್ತು ವರ್ಷ ಮೇಲ್ಪಟ್ಟು ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶವಿದೆ. ಕೊಲೆಗೆ ಸಮಾನವಾದ ಕಾಯ್ದೆ ಇದಾಗಿರುತ್ತದೆ. ಸರಕಾರಿ ಅಧಿಕಾರಿಯಾಗಿದ್ದುಕೊಂಡು ಈ ರೀತಿ ದುರ್ನಡತೆ ತೋರಿದ್ದರ ಬಗ್ಗೆ ಕಮಿಷನರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿ ಚಲಾಯಿಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Video:
An assistant executive engineer (AEE) of the public works department (PWD) who was found to be driving his car in an inebriated condition, dashed his car against a pedestrian near the Circuit House Road on the night of Sunday, March 28.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm