ಬ್ರೇಕಿಂಗ್ ನ್ಯೂಸ್
31-03-21 08:23 pm Mangaluru correspondent ಕರಾವಳಿ
ಮಂಗಳೂರು, ಮಾ.31 : ಸ್ಕೂಟರಿಗೆ ಲಾರಿ ಡಿಕ್ಕಿಯಾಗಿ ಪರಾರಿಯಾದ ಘಟನೆ ಕೇರಳ ಗಡಿಭಾಗ ಮಂಜೇಶ್ವರದ ಹೆದ್ದಾರಿಯಲ್ಲಿ ನಡೆದಿದ್ದು, ಸ್ಕೂಟರ್ ಸವಾರ ನಿವೃತ್ತ ಯೋಧ, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದ ನಿವಾಸಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ನಿವಾಸಿ, ನಿವೃತ್ತ ಅರಣ್ಯ ರಕ್ಷಕ ದಾಮೋಧರ ಮತ್ತು ಲೀಲಾವತಿ ದಂಪತಿ ಪುತ್ರ ದಿನೇಶ್ ಉಪ್ಪಾರ್ (41) ಮೃತರು.
ಸೇನೆಯಲ್ಲಿ 18 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ದಿನೇಶ್ ಉಪ್ಪಾರ್ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಉದ್ಯಾವರ ಗುತ್ತು ಎಂಬಲ್ಲಿ ಜಾಗ ಖರೀದಿಸಿ ಅಲ್ಲೇ ನೆಲೆಸಿದ್ದರು. ಕುಂಬ್ಲೆಯ ಆರಿಕ್ಕಾಡಿಯ ಸುಜಾತಾ ಅವರನ್ನು ವರಿಸಿದ್ದ ದಿನೇಶ್ ದಂಪತಿಗೆ ವೈಷ್ಣವಿ ಮತ್ತು ವೈಶುಭಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಸೇನೆಯಲ್ಲಿ ಹೈದರಾಬಾದ್, ಅಸ್ಸಾಂ, ಜಮ್ಮು, ನಾಸಿಕ್, ಕೊಯಂಬತ್ತೂರು ಮೊದಲಾದೆಡೆ 18 ವರ್ಷ ಕಾಲ ಸೇವೆ ಸಲ್ಲಿಸಿದ್ದ ದಿನೇಶ್ ನಿವೃತ್ತಿಯ ಬಳಿಕ ಮಂಗಳೂರಿನ ಗ್ಯಾಸ್ ಸರಬರಾಜು ಕಂಪೆನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬುಧವಾರ ಬೆಳಗ್ಗೆ ಎಂದಿನಂತೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳಲು ಮನೆಬಿಟ್ಟು 10 ನಿಮಿಷ ಅಂತರದಲ್ಲಿ ಹಿಂದಿನಿಂದ ಬಂದಿದ್ದ ಲಾರಿ ಡಿಕ್ಕಿ ಹೊಡೆದಿತ್ತು. ಅಪಘಾತದ ಬಳಿಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದು ಪೊಲೀಸರು ತಲಪಾಡಿ ಟೋಲ್ಗೇಟ್ನಲ್ಲಿ ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧಿಸಿ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಮಕ್ಕಳಲ್ಲದೆ ಓರ್ವ ಅಣ್ಣ ರಾಜೇಶ್ ಉಪ್ಪಾರ್, ಓರ್ವ ಸಹೋದರ ಗಣೇಶ್ ಉಪ್ಪಾರ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.
In a tragic incident a resident of Belthangady died after he met with a accident in Manjeshwar. The deceased has been identified as Dinesh (41).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm