ಬ್ರೇಕಿಂಗ್ ನ್ಯೂಸ್
14-04-21 10:45 am Mangalore Correspondent ಕರಾವಳಿ
ವಿಟ್ಲ, ಏ. 13: ಸುರಿಬೈಲು ತಿರುವಿನಲ್ಲಿ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪಿಕಪ್ ವಾಹನ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಯಾಗಿ ಸವಾರರಿಬ್ಬರಿಗೆ ಗಾಯವಾಗಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ತೊಕ್ಕೊಟ್ಟು ಮೂಲದ ದ್ವಿಚಕ್ರ ವಾಹನ ಸವಾರ ಸಂತೋಷ್ (35) ಮೃತ ಪಟ್ಟಿದ್ದಾರೆ. ಸಹ ಸವಾರ ರಂಜಿತ್ ಗಾಯಗೊಂಡಿದ್ದು ಅವರನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಪಿಕ್ಅಪ್ ವಾಹನವನ್ನು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.
ಬಂಟ್ವಾಳ ಸರಕಾರಿ ಆಸ್ವತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಸಂತೋಷ್ ಪೂಜಾರಿ ಹವ್ಯಾಸಿ ನಾಟಕ ಕಲಾವಿದರಾಗಿದ್ದು, ಸ್ತ್ರೀ ವೇಷದಾರಿಯಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಉದ್ಯೋಗಕ್ಕಾಗಿ ಇತ್ತೀಚಿಗಷ್ಟೆ ಧಾರವಾಡದಲ್ಲಿ ತರಬೇತಿ ಮುಗಿಸಿದ್ದರು. ತೊಕ್ಕೊಟ್ಟು, ದಾರಂದಬಾಗಿಲಿನ ನಿವಾಸಕ್ಕೆ ಅಪರೂಕ್ಕೆಂಬಂತೆ ಬಂದು ಹೋಗುತ್ತಿದ್ದರು. ಮೃತ ಸಂತೋಷ್ ಅವಿವಾಹಿತರಾಗಿದ್ದು ತಾಯಿ ,ಇಬ್ಬರು ಸಹೋದರಿ,ಓರ್ವ ಸಹೋದರನ ಅಗಲಿದ್ದಾರೆ
Two-wheeler rider a resident of Thokottu was dead after a pickup van rammed his bike in Vitla. The deceased had been identified as Santosh (35).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm