ಬ್ರೇಕಿಂಗ್ ನ್ಯೂಸ್
18-04-21 04:29 pm Mangaluru correspondent ಕರಾವಳಿ
ಮಂಗಳೂರು, ಏಪ್ರಿಲ್ 18: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು ಕರಾವಳಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧ ಮಾಡಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ಸರ್ಕಾರದ ನಿಯಮಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿ ಬಿಜೆಪಿ ಶಾಸಕ ರಘಪತಿ ಭಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಯ ಜನಜೀವನ ರಾಜ್ಯದ ಬೇರೆ ಜಿಲ್ಲೆಗಳ ಜನರಿಗಿಂತ ಭಿನ್ನವಾಗಿದೆ. ಈಗಾಗಲೇ ಧಾರ್ಮಿಕ ಹಿನ್ನೆಲೆಯ ಚೌಕಟ್ಟನ್ನು ಒಳಗೊಂಡ ಯಕ್ಷಗಾನ ಹರಕೆ ಬಯಲಾಟಗಳು, ನೇಮ, ದೇವತಾ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಉತ್ಸವಾದಿ ಸೇವೆಗಳಿಗೆ ದಿನಾಂಕ ಮತ್ತು ಸಮಯ ನಿಗದಿಗೊಳಿಸಲಾಗಿದೆ. ಹಾಗಾಗಿ ಈಗ ಹೇರಿರುವ ಧಾರ್ಮಿಕ ಕ್ಷೇತ್ರಗಳ ಮೇಲಿನ ನಿಷೇಧದಿಂದ ಜನರ ಧಾರ್ಮಿಕ ನಂಬಿಕೆಗಳಿಗೆ ತೊಡಕು ಉಂಟಾಗುತ್ತದೆ. ನೂತನ ನಿಯಮದಿಂದ ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಲೂ ತೊಂದರೆಯಾಗುವುದರಿಂದ ಸರ್ಕಾರ ನಿಯಮ ಸಡಿಲಿಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಸರ್ಕಾರ ನಿಯಮದ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಉಡುಪಿ ಶಾಸಕ ರಘಪತಿ ಭಟ್, ಕರಾವಳಿ ಜಿಲ್ಲೆಗಳಲ್ಲಿ ಈ ವೇಳೆ ಅತೀ ಹೆಚ್ಚು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತದೆ. ರಾಜಕೀಯ ಕಾರ್ಯಕ್ರಮಗಳಿಗೆ 200 ಜನರ ಅವಕಾಶ ಮಾಡಿದ್ದಾರೆ. ಕರಾವಳಿಯಲ್ಲಿ ರಾಜಕೀಯ ಕಾರ್ಯಕ್ರಮಗಳ ಅವಶ್ಯಕತೆ ಇಲ್ಲ. ಧಾರ್ಮಿಕ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸೋದು ಜನಪ್ರಿಯ ಸರ್ಕಾರದ ಲಕ್ಷಣವಲ್ಲ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಶಾಸಕ ರಘಪತಿ ಭಟ್ ಆಕ್ರೋಶ ವ್ಯಕ್ತಪಡಿದ್ದಾರೆ.
ಕರಾವಳಿ ಜಿಲ್ಲೆಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸಬೇಡಿ, ಜನರ ಭಾವನೆಗಳಿಗೆ ಅಡ್ಡಿ ಮಾಡದೆ ಸರ್ಕಾರದ ಆದೇಶವನ್ನು ಹಿಂಪಡೆಯಬೇಕೆಂದು ಶಾಸಕ ರಘಪತಿ ಭಟ್ ಆಗ್ರಹಿಸಿದ್ದಾರೆ.
Dakshina Kannada religious activities hight effected by state govts tough covid rules states kota poojary and Udupi mla raghupathi bhat.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm