ಬ್ರೇಕಿಂಗ್ ನ್ಯೂಸ್
19-04-21 07:04 pm Mangaluru correspondent ಕರಾವಳಿ
ಮಂಗಳೂರು, ಎ.19 : ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ನಾಯಕರು ಎಂಬ ಸಿ.ಟಿ. ರವಿ ಹೇಳಿಕೆಯ ಬಗ್ಗೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ ರೈ ಕಿಡಿಕಾರಿದ್ದಾರೆ. ಸೀಟಿ ರವಿ ಕುಲ, ಗೋತ್ರ, ಜಾತಿ ಗೊತ್ತಿಲ್ಲದ ಮನುಷ್ಯ. ಇವನಿಗೆ ರಾಹುಲ್ ಬಗ್ಗೆ ಮಾತನಾಡಲು ನೈತಿಕತೆ ಏನಿದೆ ಎಂದು ರೈ ಪ್ರಶ್ನೆ ಮಾಡಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಎ ಅಧ್ಯಕ್ಷರಾಗಿದ್ದಾಗ ಮಿತ್ರಪಕ್ಷಗಳು ಒತ್ತಾಯಿಸಿದರೂ ಸೋನಿಯಾ ಗಾಂಧಿ ತಮಗೆ ಒಲಿದು ಬಂದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿದ್ದರು. ರಾಜೀವ್ ಗಾಂಧಿ ಹಾಗೂ ಇಂದಿರಾ ಗಾಂಧಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ಅವರ ಪೀಳಿಗೆಯವರು ರಾಹುಲ್ ಗಾಂಧಿ. ಆದರೆ ಸಿ.ಟಿ. ರವಿ ತನ್ನ ಕುಲ, ಗೋತ್ರವೇ ಗೊತ್ತಿಲ್ಲದ ಮನುಷ್ಯ ಎಂದು ಟೀಕಿಸಿದರು.
ಕೊರೊನಾ ನಿಯಂತ್ರಣದಲ್ಲಿ ಸರಕಾರ ವಿಫಲವಾಗಿದೆ ಎಂದು ಟೀಕಿಸಿದ ರಮಾನಾಥ ರೈ, ಬಾಯಿ ಮಾತಿನ ಉಪಚಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವುದಿಲ್ಲ. ಜನರಿಗೆ ಕೊರೊನಾ ಸೋಂಕಿನ ಬಗ್ಗೆ ಅರಿವು ಮೂಡಿಸಬೇಕಿದೆ. ಅಲ್ಲಲ್ಲಿ ಜಾಗೃತಿ ಕಾರ್ಯಕ್ರಮಗಳು ಆಗಬೇಕು. ಆದರೆ, ಈಗಿನ ಸರಕಾರ ಕೇವಲ ಹೇಳಿಕೆಗೆ ಸೀಮಿತವಾಗಿದೆ. ಕೊರೊನಾ ನಿಯಂತ್ರಣ ವಿಚಾರದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಡುವೆ ಸಮನ್ವಯ ಕೊರತೆ ಇದ್ದು ಜನಸಾಮಾನ್ಯರು ಕಷ್ಟಪಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿತರ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಏರುತ್ತಿದ್ದು ರಾಜ್ಯ ಹಾಗೂ ಜಿಲ್ಲಾಡಳಿತಗಳು ಸರ್ವಪಕ್ಷಗಳ ಸಭೆ ಕರೆದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ವರ್ಷವೂ ಏಕಾಏಕಿ ಲಾಕ್ಡೌನ್ ಮಾಡಿ, ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡಿದ್ದರು. ಕಾರ್ಮಿಕರು, ಬಡವರು ಬದುಕಿಗಾಗಿ ಕಷ್ಟ ಪಟ್ಟಿದ್ದರು. ಆದರೆ, ಅವರಿಗೆ ಬದುಕು ನೀಡಿದ್ದು ಸಿದ್ಧರಾಮಯ್ಯ ಸರಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳಿಂದ. ದೇಶದಲ್ಲಿ ಯುಪಿಎ ಸರಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಆಹಾರ ಭದ್ರತೆ ರೀತಿಯ ಯೋಜನೆಗಳು ಜನಸಾಮಾನ್ಯರಿಗೆ ಆಸರೆಯಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿಗೆ ಚುನಾವಣೆ ಗೆಲ್ಲುವುದಷ್ಟೇ ಮುಖ್ಯವಾಗಿದೆ. ಕೊರೊನಾ ಸಮಸ್ಯೆಯಾಗಿ ಕಾಣುತ್ತಿಲ್ಲ. ಪ್ರಧಾನಿ ಹೇಗಿರಬೇಕು ಎಂಬುದನ್ನು ಮನಮೋಹನ್ ಸಿಂಗ್ ಅವರನ್ನು ನೋಡಿ ಕಲಿಯಬೇಕು. ಯುಪಿಎ ಕಾಲದಲ್ಲಿ ದೇಶದ ಜಿಡಿಪಿ ಏರುಗತಿಯಲ್ಲಿತ್ತು ಎಂದು ಹೇಳಿದರು.
ಕಾಂಗ್ರೆಸ್ ಮುಳುಗುವ ಹಡಗು ಎಂಬ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ಹೀಗೆ ಹೇಳುತ್ತಿರುವ ಮಂದಿಯ ತಾತ, ಮುತ್ತಾತರೆಲ್ಲ ಅದೇ ಹಡಗಿನಲ್ಲಿ ಕುಳಿತು ಇಲ್ಲಿಯವರೆಗೆ ಬಂದಿರಬಹುದು. ಇವರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತೆ ಬೇಡ, ಇವರ ಪಕ್ಷದಲ್ಲಿ ಹೆಗ್ಗಣ ಸತ್ತು ವಾಸನೆ ಬರುತ್ತಿದೆ. ಅದರ ಬಗ್ಗೆ ಯೋಚಿಸಲಿ ಎಂದು ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ನಾಯಕರಾದ ಶಶಿಧರ್ ಹೆಗ್ಡೆ, ಶಾಹುಲ್ ಹಮೀದ್, ನವೀನ್ ಡಿಸೋಜ, ಟಿ.ಕೆ.ಸುಧೀರ್, ಹರಿನಾಥ್, ಪೃಥ್ವಿರಾಜ್, ಅಪ್ಪಿಲತಾ, ನೀರಜ್ಪಾಲ್, ಭಾಸ್ಕರ್ ಮೊಯ್ಲಿ ಮೊದಲಾದವರು ಉಪಸ್ಥಿತರಿದ್ದರು.
Mangalore Congress leader Ramanath Rai slams at CT ravi for mocking at Rahul Gandhi at the press meet held at congress office.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm