ಬ್ರೇಕಿಂಗ್ ನ್ಯೂಸ್
20-04-21 06:07 pm Mangalore Correspondent ಕರಾವಳಿ
ಮಂಗಳೂರು, ಎ.20; ಕೋವಿಡ್ ನಿರ್ಬಂಧ ಹಿನ್ನೆಲೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.
ಕಟೀಲಿನಲ್ಲಿ ಸಂಪ್ರದಾಯ ಪ್ರಕಾರ ಉತ್ಸವ ನಡೆಯುತ್ತಿದ್ದು ದ.ಕ. ಜಿಲ್ಲಾಡಳಿತದ ನೋಟಿಸ್ ಹಿನ್ನೆಲೆಯಲ್ಲಿ ಉತ್ಸವವನ್ನು ಅರ್ಧಕ್ಕೆ ಮೊಟಕು ಮಾಡಲಾಗಿದೆ. ಇದರಿಂದಾಗಿ ಇಂದು ರಾತ್ರಿ ನಡೆಯಬೇಕಿದ್ದ ರಥೋತ್ಸವ ಹಾಗು ತೂಟೆದಾರವನ್ನು ದಿಢೀರ್ ಆಗಿ ರದ್ದುಗೊಳಿಸಲಾಗಿದೆ.
ಎರಡು ದಿನಗಳ ಹಿಂದೆ ರಾಜ್ಯ ಸರಕಾರ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ನಿರ್ಬಂಧಿಸಿ ಆದೇಶ ಮಾಡಿತ್ತು. ಇದರಂತೆ, ದ.ಕ. ಜಿಲ್ಲಾ ಮಟ್ಟದ ಅಧಿಕಾರಿಗಳು ದೇವಾಲಯಕ್ಕೆ ತೆರಳಿ ಸರ್ಕಾರದ ಆದೇಶದ ಅನ್ವಯ ಜಾತ್ರೋತ್ಸವ ಆಚರಣೆ ರದ್ದು ಮಾಡುವಂತೆ ಸೂಚಿಸಿದ್ದಾರೆ. ಇಂದು ಸಂಜೆ ನಡೆಯಬೇಕಿದ್ದ ಕಟೀಲು ಶ್ರೀ ಅಮ್ಮನವರ ಎಕ್ಕಾರು ಭೇಟಿ ಹಾಗೂ ಶಿಬರೂರು ಶ್ರೀ ಕೊಡಮಣಿತ್ತಾಯ ಭೇಟಿ ರದ್ದಾಗಿದೆ.
ಈ ಬಾರಿ ನಿರ್ಬಂಧಗಳಿದ್ದರೂ ಸರಳವಾಗಿ ಜಾತ್ರೋತ್ಸವ ಆಚರಣೆಗೆ ನಿರ್ಧರಿಸಲಾಗಿತ್ತು. ಅದರಂತೆ ವಾರದ ಹಿಂದೆ ಜಾತ್ರೆ ಆರಂಭಗೊಂಡಿತ್ತು. ಆದರೆ ಜನರಿಗೆ ನಿರ್ಬಂಧಗಳನ್ನು ಹೇರಿದ್ದರೂ ಜನರು ಸ್ವಯಂ ಆಗಿ ದೇವಾಲಯಕ್ಕೆ ದೊಡ್ಡ ಸಂಖ್ಯೆಯಲ್ಲಿ ಬರುವುದು ಜಿಲ್ಲಾಡಳಿತಕ್ಕೆ ಸವಾಲಾಗಿತ್ತು. ಆ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರು ತಹಸೀಲ್ದಾರ್ ಮತ್ತಿತರ ಅಧಿಕಾರಿಗಳು ದೇವಳಕ್ಕೆ ತೆರಳಿ ಸರ್ಕಾರದ ಆದೇಶದ ಅನ್ವಯ ಜಾತ್ರೋತ್ಸವ ಆಚರಣೆ ರದ್ದು ಮಾಡುವಂತೆ ಸೂಚನೆ ನೀಡಿದರು.
ಸೋಮವಾರ ದೇವಳದ ಹಗಲು ರಥೋತ್ಸವ ಬೇಗನೆ ಮುಗಿಸಲಾಗಿತ್ತು. ಮಂಗಳವಾರ ಸಂಜೆ ನಡೆಯಬೇಕಿದ್ದ ಕಟೀಲು ಅಮ್ಮನವರ ಎಕ್ಕಾರು ಭೇಟಿ ಹಾಗೂ ಶಿಬರೂರು ಶ್ರೀ ಕೊಡಮಣಿತ್ತಾಯ ಭೇಟಿಯೂ ರದ್ದಾಗಿದೆ. ಜನಸೇರುವ ವಿಧಿಗಳು ರದ್ದುಗೊಂಡರೂ, ಉತ್ಸವದ ಉಳಿದ ಕಾರ್ಯಕ್ರಮಗಳನ್ನು ಪ್ರಾಂಗಣದ ಒಳಗೇ ಸರಳವಾಗಿ ನಡೆಸುವ ಸಾಧ್ಯತೆ ಇದೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಕರಾವಳಿಯ ಶಾಸಕರು ದೇವಸ್ಥಾನಗಳ ಉತ್ಸವ, ಕೋಲ, ನೇಮ ಸೇರಿ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದರು. ಶಾಸಕರು ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಈ ಬಗ್ಗೆ ಮನವಿಯನ್ನೂ ಮಾಡಿದ್ದರು. ಆದರೆ, ಜಿಲ್ಲಾಧಿಕಾರಿ ನೀವು ರಾಜ್ಯ ಸರಕಾರದಿಂದ ಗೈಡ್ ಲೈನ್ಸ್ ತರದೆ ನಾವೇನೂ ಮಾಡಕ್ಕಾಗಲ್ಲ ಎಂದಿದ್ದರು.
Mangalore Kateel Temple Utsav 2021 cancelled. Though the BJP leaders have requested permissions yet the state government has rejected the appeal.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm