ಬ್ರೇಕಿಂಗ್ ನ್ಯೂಸ್
21-04-21 12:57 pm Mangalore Correspondent ಕರಾವಳಿ
ಉಳ್ಳಾಲ, ಎ.21 : ಕೋವಿಡ್ ನಿರ್ಬಂಧ ಕರಾವಳಿಯಲ್ಲಿ ಈಗಾಗಲೇ ನಿಗದಿಯಾಗಿರುವ ಧಾರ್ಮಿಕ ವಿಧಿಗಳಿಗೆ ಭಾರೀ ತೊಡಕಾಗಿ ಪರಿಣಮಿಸಿದೆ. ಮಂಗಳೂರು ಹೊರವಲಯದ ಇತಿಹಾಸ ಪ್ರಸಿದ್ಧ ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ವಿಧಿಗಳು ನಡೆಯುತ್ತಿದ್ದು ಜನ ಸೇರಬಾರದೆಂಬ ಸರಕಾರದ ಆದೇಶ ಆಡಳಿತ ಮಂಡಳಿಯ ಸದಸ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಸೋಮವಾರ ತೊಕ್ಕೊಟ್ಟಿನಿಂದ ಸೋಮೇಶ್ವರ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಮತ್ತು ನೂತನ ಬ್ರಹ್ಮರಥದ ಸಮರ್ಪಣೆ ಹಿನ್ನೆಲೆಯಲ್ಲಿ ಮೆರವಣಿಗೆ ನಡೆಸಿದ್ದ ಕಾರಣಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ವಿರುದ್ದ ಉಳ್ಳಾಲ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ನಿಗದಿಯಾಗಿದ್ದ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶದ ಕಾರ್ಯಕ್ರಮ ಕೊರೊನಾ ಲಾಕ್ ಡೌನ್ ಕಾರಣದಿಂದ ಮುಂದೂಲ್ಪಟ್ಟಿತ್ತು. ಈ ಬಾರಿ ಮತ್ತೆ ಉತ್ಸವ ಸಮಿತಿಯವರು ಎ.18ರಿಂದ 30ರ ವರೆಗೆ ಬ್ರಹ್ಮಕಲಶ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದ್ದರು. ಆದರೆ, ರಾಜ್ಯದಲ್ಲಿ ಮತ್ತೆ ಕೋವಿಡ್ ನಿರ್ಬಂಧ ತಲೆದೋರಿದ್ದು ಸರಳ ವಿಧಿಗಳ ಮೂಲಕ ಕಾರ್ಯಕ್ರಮ ಮಾಡುವಂತಾಗಿದೆ.
ಎರಡು ದಿನಗಳ ಹಿಂದೆ ತೊಕ್ಕೊಟ್ಟು ವೀರಮಾರುತಿ ವ್ಯಾಯಾಮ ಶಾಲೆಯಿಂದ ಸೋಮನಾಥ ಕ್ಷೇತ್ರಕ್ಕೆ ಹಸಿರು ಹೊರೆಕಾಣಿಕೆ ಮತ್ತು ನೂತನ ಬ್ರಹ್ಮರಥ ಸಮರ್ಪಣೆಯ ಶೋಭಾಯಾತ್ರೆ ನಡೆದಿತ್ತು. ಶೋಭಾ ಯಾತ್ರೆಯಲ್ಲಿ ಸಹಸ್ರಾರು ಜನರು ಪಾಲ್ಗೊಂಡಿದ್ದರು. ಕೋವಿಡ್ ನಿಯಮಗಳನ್ನು ಪಾಲಿಸದೆ ಮೆರವಣಿಗೆ ನಡೆಸಿರುವ ಕಾರಣಕ್ಕೆ ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಅವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸೋಮೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ವಿರುದ್ಧ ಕೇಸು ದಾಖಲಿಸಿದ್ದಾರೆ.
ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ, ಐಪಿಸಿ ಸೆಕ್ಷನ್ 269ರಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಸೂಚನೆಯಂತೆ ಮೂರು ದಿನಗಳ ಹಿಂದೆಯೇ ತಹಶೀಲ್ದಾರ್ ಅವರು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಮೊಟಕುಗೊಳಿಸುವಂತೆ ಸೋಮೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ನೋಟೀಸು ನೀಡಿದ್ದರು. ಆದರೆ ಅದನ್ನು ಉಲ್ಲಂಘಿಸಿ ಶೋಭಾಯಾತ್ರೆ ನಡೆಸಲಾಗಿತ್ತು.
A case has been filed against Someshwara Temple for violating covid guidelines by gathering and holding procession.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am