ಬ್ರೇಕಿಂಗ್ ನ್ಯೂಸ್
22-04-21 07:25 pm Mangaluru correspondent ಕರಾವಳಿ
ಮಂಗಳೂರು, ಎ.22: ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ನಗರದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗತ್ಯ ಸಾಮಗ್ರಿಗಳ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪ್, ಕಚೇರಿ ವ್ಯಾಪಾರ ಸಂಕೀರ್ಣಗಳನ್ನು ಕಟ್ಟುನಿಟ್ಟಾಗಿ ಬಂದ್ ಮಾಡುವಂತೆ ಹೇಳಿಕೊಂಡು ಹೋಗಿದ್ದಾರೆ.
ಗುರುವಾರ ಸಂಜೆ ದಿಢೀರ್ ಆಗಿ ಪಾಲಿಕೆಯ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಬಟ್ಟೆ ಶಾಪ್, ಚಪ್ಪಲಿ ಅಂಗಡಿ, ಮೊಬೈಲ್ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ. ನಗರದ ಹಂಪನಕಟ್ಟೆ, ಸೆಂಟ್ರಲ್ ಮಾರುಕಟ್ಟೆ, ಸ್ಟೇಟ್ ಬ್ಯಾಂಕ್ ಪರಿಸರದಲ್ಲಿ ಎಲ್ಲ ರೀತಿಯ ಅಂಗಡಿಗಳನ್ನು ತೆರೆದಿದ್ದು ಎಂದಿನಂತೆ ವ್ಯಾಪಾರ ನಡೆಸುತ್ತಿದ್ದವು.
ರಾಜ್ಯ ಸರಕಾರ ಹೊರಡಿಸಿರುವ ಗೈಡ್ ಲೈನ್ಸ್ ಪ್ರಕಾರ, ಅಗತ್ಯ ಸಾಮಗ್ರಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಅಂಗಡಿಗಳು, ಶಾಪ್ ಗಳನ್ನು ತೆರೆಯುವಂತಿಲ್ಲ. ಅದರಂತೆ, ಮಾರ್ಗಸೂಚಿಯ ಬಗ್ಗೆ ವ್ಯಾಪಾರಸ್ಥರಿಗೆ ಅರಿವು ಮೂಡಿಸುವುದಕ್ಕಾಗಿ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತರಕಾರಿ, ದೀನಸಿ ಸಾಮಗ್ರಿ, ಹಾಲು, ಪೆಟ್ರೋಲ್, ಹೊಟೇಲ್, ಆಹಾರ ವಸ್ತುಗಳ ಉತ್ಪಾದನೆ ಮತ್ತು ಮಾರಾಟದ ಬೇಕರಿ ಇನ್ನಿತರ ಅಂಗಡಿಗಳು, ಬ್ಯಾಂಕ್, ವಿಮಾ ಕಚೇರಿಗಳು ಹೀಗೆ ಜನರ ದಿನನಿತ್ಯದ ಜೀವನಕ್ಕೆ ಬೇಕಾಗುವ ಸಾಮಗ್ರಿಗಳನ್ನು ಹೊರತುಪಡಿಸಿ ಇತರೇ ವ್ಯಾಪಾರ ಸಂಕೀರ್ಣಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.
ಎಪ್ರಿಲ್ 21ರಿಂದ ಮೇ 4ರ ವರೆಗಿನ ಅರೆ ಲಾಕ್ಡೌನ್ ಘೋಷಣೆಯಲ್ಲಿ ಇದನ್ನು ಒಳಗೊಳಿಸಿಯೇ ಆದೇಶ ಮಾಡಲಾಗಿತ್ತು. ಆದರೆ, ಮೊದಲ ದಿನವಾದ ಎಪ್ರಿಲ್ 21ರಂದು ಇತರೇ ದಿನಗಳಂತೇ ಎಲ್ಲ ರೀತಿಯ ಅಂಗಡಿ, ಶಾಪ್ ಗಳನ್ನು ತೆರೆದು ವ್ಯಾಪಾರಸ್ಥರು ವ್ಯಾಪಾರ ನಡೆಸಿದ್ದರು. ಇದು ತಿಳಿಯುತ್ತಿದ್ದಂತೇ ಬೆಂಗಳೂರು, ಮಂಗಳೂರು ಸೇರಿ ರಾಜ್ಯದಾದ್ಯಂತ ಕೆಳಹಂತದ ಅಧಿಕಾರಿಗಳಿಗೆ ಈ ಬಗ್ಗೆ ಅರಿವು ಮೂಡಿಸುವಂತೆ ಸೂಚನೆ ನೀಡಲಾಗಿದೆ. ಅದರ ಪ್ರಕಾರ, ಸಂಜೆ ಹೊತ್ತಿಗೆ ಅಲರ್ಟ್ ಮಾಡುತ್ತಾ ಅಧಿಕಾರಿಗಳು ಸಾಗಿದ್ದಾರೆ. ನಾಳೆಯೂ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಅಂಗಡಿ, ಶಾಪ್ ಗಳನ್ನು ತೆರೆದರೆ ದಂಡ ಕಟ್ಟಬೇಕು ಎಂದು ಸೂಚನೆ ನೀಡಿದ್ದಾರೆ.
The Mangalore Mcc authorities close down shops that were open even after strict government orders on Night Curfew.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am