ಬ್ರೇಕಿಂಗ್ ನ್ಯೂಸ್
28-04-21 08:34 pm Mangaluru correspondent ಕರಾವಳಿ
ಉಳ್ಳಾಲ, ಎ.28: ಸ್ನೇಹಿತರೊಂದಿಗೆ ನೇತ್ರಾವತಿ ರೈಲ್ವೇ ಸೇತುವೆ ಬಳಿ ವಿಹಾರಕ್ಕೆ ತೆರಳಿದ್ದ ಯುವಕ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದು ಆತನ ಮೃತದೇಹ ಬುಧವಾರ ಸಂಜೆ ನೇತ್ರಾವತಿ ತೀರದಲ್ಲಿ ಪತ್ತೆಯಾಗಿದೆ.
ಉಳ್ಳಾಲಬೈಲ್ ನಿವಾಸಿ ನಿತಿನ್(32) ಮೃತ ಯುವಕ. ನಿತಿನ್ ಸೋಮವಾರ ಮಧ್ಯಾಹ್ನ ತನ್ನಿಬ್ಬರು ಸ್ನೇಹಿತರ ಜೊತೆಗೆ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದ್ದು, ನಂತರ ಸಂಜೆ ಹೊತ್ತಿಗೆ ಮೂವರು ನೇತ್ರಾವತಿ ರೈಲ್ವೇ ಸೇತುವೆ ಬಳಿಗೆ ತೆರಳಿದ್ದರು. ಈ ಪೈಕಿ ನಿತಿನ್ ಮಾತ್ರ ನಾಪತ್ತೆಯಾಗಿದ್ದ. ಈ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು ಪೊಲೀಸರು ನಿತಿನ್ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.



ಪೊಲೀಸರ ವಶದಲ್ಲಿರುವ ಇಬ್ಬರು ಸ್ನೇಹಿತರು ನಿತಿನ್ ರೈಲ್ವೇ ಸೇತುವೆಯಲ್ಲಿ ಟ್ರ್ಯಾಕ್ ಮೇಲೆ ಮಲಗಿದ್ದು ರೈಲು ಬಂದಾಗ ತಪ್ಪಿಸುವ ಯತ್ನದಲ್ಲಿ ನದಿಗೆ ಹಾರಿದ್ದಾಗಿ ಹೇಳಿದ್ದಾರಂತೆ. ಘಟನೆಯ ಸತ್ಯಾಸತ್ಯತೆ ಪೊಲೀಸರ ವಿಚಾರಣೆಯಲ್ಲಿ ತಿಳಿಯಬೇಕಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಆಡಂಕುದ್ರುವಿನಲ್ಲಿ ನಿತಿನ್ ಮೃತದೇಹ ಪತ್ತೆಯಾಗಿದ್ದು ದೇಹವು ಸಂಪೂರ್ಣ ಕೊಳೆತು ಹೋಗಿದೆ. ಕಂಕನಾಡಿ ಠಾಣೆ ಇನ್ಸ್ ಪೆಕ್ಟರ್ ಅಶೋಕ್ ಮತ್ತು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ಸಮಕ್ಷಮದಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ನಿತಿನ್ ಅವಿವಾಹಿತರಾಗಿದ್ದು ಈ ಹಿಂದೆ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದು ಕೊರೊನಾ ಲಾಕ್ ಡೌನ್ ನಂತರ ಊರಿಗೆ ಮರಳಿದ್ದು ವೆಲ್ಡರ್ ವೃತ್ತಿ ನಡೆಸುತ್ತಿದ್ದರು. ಮೃತ ನಿತಿನ್ ಸಹೋದರ ಮತ್ತು ತಾಯಿಯನ್ನು ಅಗಲಿದ್ದಾರೆ.
ಉಳ್ಳಾಲ: ಸ್ನೇಹಿತರ ಜೊತೆಗಿದ್ದ ಯುವಕ ನೇತ್ರಾವತಿ ಸೇತುವೆಯಲ್ಲಿ ದಿಢೀರ್ ನಾಪತ್ತೆ
A 32 year old Man who was missing after he went with his friends to Netravathi Railway bridge his body has been found at river side. The deceased has been identified as Nithin (32). A missing case was filed at Ullal police station.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm