ಬ್ರೇಕಿಂಗ್ ನ್ಯೂಸ್
01-05-21 08:24 pm Mangaluru Correspondent ಕರಾವಳಿ
ಮಂಗಳೂರು, ಮೇ 1: ನೇತ್ರಾವತಿ ನದಿಗೆ ಕಸ ಎಸೆದು ಸಿಕ್ಕಿಬಿದ್ದ ಕಾರು ಮತ್ತು ಮಹಿಳೆಯರ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಬೆಳಗ್ಗೆ ಉಳ್ಳಾಲದ ನೇತ್ರಾವತಿ ನದಿಯ ಸೇತುವೆಯಲ್ಲಿ ಕಾರು ನಿಲ್ಲಿಸಿ, ಕಸದ ಪ್ಯಾಕೆಟನ್ನು ಮಹಿಳೆಯೊಬ್ಬರು ನದಿಗೆ ಎಸೆದಿದ್ದು ಅದನ್ನು ಹಿಂದಿನ ಕಾರಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ, ಮಹಾನಗರ ಪಾಲಿಕೆಯಿಂದ ಕ್ರಮ ಜರುಗಿಸಲಾಗಿದೆ.
ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.


ಕಾರಿನಲ್ಲಿದ್ದ ಮೈಸೂರು ಮೂಲದ ಶೈಲಜಾ ನಾಯಕ್, ರಚನಾ ನಾಯಕ್ ಮತ್ತು ಸುಶೀಲಾ ಎಂಬವರ ಮೇಲೆ ಕೇಸು ದಾಖಲಾಗಿದೆ. ಅಲ್ಲದೆ, ಕಾರಿನಲ್ಲಿದ್ದವರು ಮಾಸ್ಕ್ ಧರಿಸದೆ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಪೊಲೀಸರು ಜಿಲ್ಲಾಧಿಕಾರಿಗೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರನ್ನು ಪತ್ತೆ ಮಾಡಿ ತ್ವರಿತ ಕ್ರಮ ಜರುಗಿಸಿದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ರಂಜಿತ್ ಕುಮಾರ್ ಕಾರ್ಯ ನಿರ್ವಹಣೆಯನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ತಮ್ಮ ಟ್ವಿಟರ್ ನಲ್ಲಿ ಶ್ಲಾಘಿಸಿದ್ದಾರೆ.
ಪೊಲೀಸರು ತುರ್ತು ಕ್ರಮ ಕೈಗೊಂಡು ನದಿಯನ್ನು ಮಲಿನ ಮಾಡುವವರಿಗೆ ಬಿಸಿ ಮುಟ್ಟಿಸಿದ ರೀತಿಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
Read: ಮಂಗಳೂರು: ಧಮ್ ಲಗಾಕೆ ಐಸಾ... ನೇತ್ರಾವತಿ ಸೇತುವೆಯಲ್ಲಿ ಕಾರು ನಿಲ್ಲಿಸಿ ಹಾಕಿದ್ರೂ ಕಸ ! ವೀಡಿಯೋ ವೈರಲ್
Vehicle seized in kankanadi police station. Appreciate the prompt and quick action by Ranjith IPS Acp south and his team.. pic.twitter.com/6JbGT7WevT
— N. Shashi Kumar CP Mangaluru City (@compolmlr) May 1, 2021
South Acp Ranjith Kumar and team have took quick action in the incident where a woman was seen throwing garbage over the fence of Netravati bridge in Mangalore. A video of the incident had gone viral on social media on Saturday May 1.Kankanady police seized the car and filed a case responding to a complaint filed by senior health officer of Mangaluru City Corporation.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm