ಬ್ರೇಕಿಂಗ್ ನ್ಯೂಸ್
04-05-21 02:39 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 4 : ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಎಂಬವರು ಬ್ಯಾಂಕಿನ ಕಟ್ಟಡದಲ್ಲಿಯೇ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ಸೊಸೈಟಿಗೆ ಬಂದವರು ಸ್ವಲ್ಪ ಸಮಯದ ಬಳಿಕ ಕಾಣಿಸಲಿಲ್ಲ ಎನ್ನಲಾಗಿದ್ದು, ಅವರ ಮೊಬೈಲಿಗೆ ಕರೆ ಮಾಡಿದಾಗ ಸೊಸೈಟಿಯ ಸಭಾಭವನದಲ್ಲಿ ರಿಂಗ್ ಆಗುತ್ತಿರುವುದು ಕಂಡುಬಂದಿತ್ತು. ಬಳಿಕ ನೋಡಿದಾಗ ಅವರು ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಬ್ಬರು ನಿರ್ದೇಶಕರ ಕಿರುಕುಳ !
ಸ್ಥಳಕ್ಕೆ ಆಗಮಿಸಿದ ಅವರ ಪತ್ನಿ ಸಂಘದಲ್ಲಿ ಇಬ್ಬರು ನಿರ್ದೇಶಕರು ಅವರಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಇವತ್ತೇ ವಿಆರ್ ಎಸ್ ತೆಗೆದುಕೊಂಡು ಕೆಲಸ ಬಿಡಬೇಕು ಎಂದು ಒತ್ತಡ ಹೇರುತ್ತಿದ್ದರು ಎಂದು ಅವರು ದೂರಿದ್ದಾರೆ.

ಸಮಗ್ರ ತನಿಖೆಗೆ ಮಾಜಿ ಶಾಸಕ ಬಂಗೇರ ಒತ್ತಾಯ
ಘಟನೆಯ ಬಳಿಕ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಕೆ. ವಸಂತ ಬಂಗೇರ, ಆತ್ಮಹತ್ಯೆ ಪ್ರಕರಣದ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು. ಯಾವ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಹಿರಂಗಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Dharamshala society CEO commits suicide in the bank building. The deceased has been identified as Ravindra. The wife has alleged that two directors were solely responsible for the death of her husband.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm