ಬ್ರೇಕಿಂಗ್ ನ್ಯೂಸ್
05-05-21 03:22 pm Mangalore Correspondent ಕರಾವಳಿ
ಉಳ್ಳಾಲ, ಮೇ 5 : ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದು ಕೋವಿಡ್ ಬಾಧಿತರಿಗಾಗಿ ತುರ್ತು ಸಹಾಯವಾಣಿ ರಚಿಸಲಾಗಿದೆ. ಉಳ್ಳಾಲ ನಗರಸಭೆ ಕೋವಿಡ್ ಸಹಾಯವಾಣಿ 8024487311 ಆಗಿರುತ್ತದೆ ಎಂದು ಉಳ್ಳಾಲ ನಗರಸಭೆ ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.
ನಗರ ವ್ಯಾಪ್ತಿಯಲ್ಲಿ ಮೇ 4 ರ ವರೆಗೆ 202 ಕೋವಿಡ್ ಪಾಸಿಟಿವ್ ಕೇಸ್ ಕಂಡುಬಂದಿದೆ. ಅದರಲ್ಲಿ 164 ಮಂದಿ ಹೋಮ್ ಐಸೊಲೇಷನಲ್ಲಿ ಇದ್ದು ನಗರಸಭೆ ಅಧಿಕಾರಿಗಳು ನಿತ್ಯವೂ ಅವರಿಗೆ ಫೋನ್ ಮಾಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. 38 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಕೂಡಲೇ ಆಸ್ಪತ್ರೆಗೆ ದಾಖಲಾಗುವ ಅಗತ್ಯ ಇಲ್ಲ. ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯಬಹುದು.

ನಗರಸಭೆಯ ಅಧಿಕಾರಿಗಳು ಹೋಮ್ ಐಸೊಲೇಷನ್ ನಲ್ಲಿ ಇರುವವರನ್ನು ದಿನನಿತ್ಯವೂ ಸಂಪರ್ಕಿಸಿ ರೋಗ ಉಲ್ಬಣವಾದಲ್ಲಿ ಅವರನ್ನು ಆಸ್ಪತ್ರೆ ಸೇರಿಸುವ ಕಾರ್ಯ ನಡೆಸುತ್ತಾರೆ. ಜನರು ಸಾಮಾಜಿಕ ಅಂತರ, ಮಾಸ್ಕ್ ಹಾಕದೆ ಬೇಜವಾಬ್ದಾರಿಯಿಂದ ವರ್ತಿಸುವುದು ಸರಿಯಲ್ಲ. ಸರಕಾರದ ಆದೇಶಗಳನ್ನು ಗಾಳಿಗೆ ತೂರುವವರ ವಿರುದ್ಧ ದಂಡ ಪ್ರಯೋಗಿಸಿದ್ದೇವೆ. ಕೋವಿಡ್ ಎರಡನೇ ಅಲೆಯು ತೀವ್ರವಾಗಿ ಹರಡುತ್ತಿದ್ದು ಸಾರ್ವಜನಿಕರು ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಮನೆಯಲ್ಲೇ ಇದ್ದು ಅಗತ್ಯವಿದ್ದರೆ ಮಾತ್ರ ಹೊರಗಡೆ ಬರುವಂತೆ ಪೌರಾಯುಕ್ತ ರಾಯಪ್ಪ ಅವರು ಎಚ್ಚರಿಕೆ ನೀಡಿದರು.
ನಗರ ಉಪಾಧ್ಯಕ್ಷ ಆಯುಬ್ ಮಂಚಿಲ ಮಾತನಾಡಿ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಕೋವಿಡ್ ನಿಯಮ ಪಾಲಿಸುವಂತೆ ನಗರಸಭೆಯ ವತಿಯಿಂದ ಲಿಖಿತವಾಗಿ ವಿನಂತಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ತೀವ್ರತೆಯನ್ನು ಗಮನಿಸಿ ನಗರಸಭೆ ವತಿಯಿಂದ ದಿನಸಿ ಕಿಟ್ ಗಳನ್ನು ವಿತರಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಮುಂಬರುವ ದಿನಗಳಲ್ಲಿ ಕೋವಿಡ್ ಬಾಧಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ನಗರಸಭೆಯಿಂದ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗುವುದೆಂದು ಹೇಳಿದರು. ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಝರಿನಾ ಬಾನು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
For the help of Covid - 19 patients, the Ullal town municipal corporation had released a helpline no during distress 8024487311.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm