ಬ್ರೇಕಿಂಗ್ ನ್ಯೂಸ್
06-05-21 05:56 pm Mangalore Correspondent ಕರಾವಳಿ
ಮಂಗಳೂರು, ಮೇ 6: ದಿನದಿಂದ ದಿನಕ್ಕೆ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮೇ 7ರಿಂದ (ಶುಕ್ರವಾರ) ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಟಫ್ ರೂಲ್ಸ್ ಜಾರಿಗೆ ತರಲು ನಿರ್ಧರಿಸಿದೆ.
ದ.ಕ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲೂ ಕೊರೋನಾ ಪ್ರಕರಣ ಹೆಚ್ಚುತ್ತಿರುವುದರಿಂದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಸದರು, ಶಾಸಕರ ಜೊತೆ ತುರ್ತು ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಎಂಬ ಸಲಹೆಗಳು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಂದ ಕೇಳಿಬಂದಿದ್ದು ಇದರಂತೆ ಜಿಲ್ಲಾಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ಇದರಂತೆ, ದಿನಸಿ ಖರೀದಿಗೆ ಮತ್ತು ಜನರ ಓಡಾಟದ ವಿಚಾರದಲ್ಲಿ ಕೆಳಗಿನಂತೆ ಕ್ರಮ ಜರುಗಿಸಲಾಗಿದೆ. ಜಿಲ್ಲೆಯಾದ್ಯಂತ ಮೇ 7 ರ ಬೆಳಗ್ಗೆ 6 ರಿಂದ 9 ಗಂಟೆ ವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇರಲಿದೆ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. 10 ಗಂಟೆಯ ಬಳಿಕ ಜನರು ರಸ್ತೆ ಮೇಲೆ, ವಾಹನಗಳಲ್ಲಿ ಓಡಾಡುವುದು ಕಂಡುಬಂದರೆ ವಾಹನ ಜಪ್ತಿ ಸೇರಿದಂತೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ.
ವೈದ್ಯಕೀಯ ಅಗತ್ಯಕ್ಕೆ ತೆರಳುವವರು ತಮ್ಮ ಮನೆಯ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಝ್ ಮಾಡಲು ಪೊಲೀಸರಿಗೆ ಅವಕಾಶ ನೀಡಲಾಗಿದೆ. ಜನರ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲು ಪೊಲೀಸರ ಮೂಲಕ ಲಾಠಿ ಎತ್ತಲು ಅನುಮತಿ ನೀಡಲಾಗಿದೆ.
ಮೇ 15 ಬಳಿಕ ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ಇರುವುದಿಲ್ಲ. ಮೇ 15 ರ ಬಳಿಕ ನಿಗದಿಯಾಗಿರುವ ಎಲ್ಲ ರೀತಿಯ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲು ಜಿಲ್ಲಾಡಳಿತ ನಿರ್ಣಯ ಮಾಡಿದೆ. ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿ ಪಡೆದಿದ್ದರೂ ಆಯಾ ಭಾಗದ ಅಧಿಕಾರಿಗಳು ಸಂಬಂಧಿತರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್, ಸಂಸದ ನಳಿನ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಮಾಜಿ ಸಚಿವ ಯು.ಟಿ.ಖಾದರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಕೇಳಿಬಂದ ಸಲಹೆಗಳು...
Covid spike in Dakshina Kannada Mangalore DC orders tougher rules to restrict the unnecessary movement of people from May 7th. As per the order, people will be allowed to purchase essential commodities from 6 am to 9 am, rather than till 10 am. People will be allowed to purchase medical supplies from the nearest pharmacies.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am