ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ದ.ಕ. ಜಿಲ್ಲೆಯಲ್ಲಿ ಮತ್ತೆ 204 ಮಂದಿಯಲ್ಲಿ ಸೋಂಕು-5713ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

31-07-20 07:06 pm       Mangalore Reporter   ಕರಾವಳಿ

ದ.ಕ. ಜಿಲ್ಲೆಯಲ್ಲಿ ಮತ್ತೆ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 5713ಕ್ಕೆ ಏರಿಕೆಯಾಗಿದೆ.

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೆ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 5713ಕ್ಕೆ ಏರಿಕೆಯಾಗಿದೆ.

ಶುಕ್ರವಾರದಂದು ಮತ್ತೆ 70 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ 2631 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 2929 ಮಂದಿ ಜಿಲ್ಲೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಪತ್ತೆಯಾದ ಸೋಂಕಿತರ ಪೈಕಿ 75 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 63 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 14 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. 52 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಮತ್ತೆ ಐವರು ಸೋಂಕಿಗೆ ಬಲಿ:
ಮಂಗಳೂರು ನಿವಾಸಿ ಸುಮಾರು 47 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಬಂಟ್ವಾಳದ 75 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರಿನ 63 ವರ್ಷದ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆಯ 88 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ನಿವಾಸಿ 75 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ.