ಬ್ರೇಕಿಂಗ್ ನ್ಯೂಸ್
13-05-21 09:35 pm Mangaluru Correspondent ಕರಾವಳಿ
ಮಂಗಳೂರು, ಮೇ 13: ಲೇಡಿಗೋಷನ್ ಆಸ್ಪತ್ರೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸುಮಾರು 84 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕದ ಪೂರ್ಣ ವೆಚ್ಚವನ್ನು ಮಂಗಳೂರು ಕ್ರೆಡಾಯ್ ನೇತೃತ್ವದಲ್ಲಿ ಭರಿಸಲು ಉದ್ದೇಶಿಸಿದ್ದು, ಇದರ ಅಂಗವಾಗಿ 41.86 ಲಕ್ಷ ರೂ. ಮೊತ್ತದ ಚೆಕ್ ಅನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ.
ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಘಟಕದ ಶೇ. 50ರಷ್ಟು ಮೊತ್ತದ ಚೆಕ್ ಅನ್ನು ಮುಂಗಡವಾಗಿ ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಸಮಕ್ಷಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಚೆಕ್ ಹಸ್ತಾಂತರಿಸಲಾಯಿತು.
ಕೋವಿಡ್ 19 ವೈರಸ್ನಿಂದ ದೇಶದಲ್ಲಿ ಅಕ್ಸಿಜನ್ ಅಭಾವ ಸೃಷ್ಟಿಯಾಗಿದೆ. ಹಲವು ಮಂದಿಯ ಸಾವಿಗೂ ಅಕ್ಸಿಜನ್ ಕೊರತೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಘಟಕ ತೆರೆಯಲು ಸರಕಾರ ಯೋಜನೆ ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಾಕಲು ಉದ್ದೇಶಿಸಿದ ಅಕ್ಸಿಜನ್ ಘಟಕದ ಮೊತ್ತದ ಜವಾಬ್ದಾರಿಯನ್ನು ಕ್ರೆಡಾಯ್ ಮಂಗಳೂರು ಘಟಕ ತೆಗೆದುಕೊಂಡಿದೆ. ಶೇ.50ರಷ್ಟು ಮೊತ್ತವನ್ನು ಇಂದು ಪಾವತಿಸಿದರೆ, ಬಾಕಿ ಉಳಿದ ಶೇ. 50ರಷ್ಟು ಮೊತ್ತವನ್ನು ತಿಂಗಳಿನೊಳಗೆ ಹಸ್ತಾಂತರಿಸಲಾಗುವುದು ಎಂದು ಪುಷ್ಪರಾಜ್ ಜೈನ್ ಹೇಳಿದರು.
ಕ್ರೆಡಾಯ್ ನೇತೃತ್ವದ ಯೋಜನೆಗೆ ಕೆನರಾ ಚೇಂಬರ್ ಆಫ್ ಕಾಮರ್ಸ್ 15 ಲಕ್ಷ ರೂ., ಮಂಗಳೂರಿನ ನಿರ್ಮಾಣಕಾರರ ಅಸೋಸಿಯೇಷನ್ 15 ಲಕ್ಷ ರೂ., ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಮಂಗಳೂರು ಘಟಕ ವತಿಯಿಂದ 8 ಲಕ್ಷ ರೂ. ನೀಡಿದೆ. ಬಾಕಿ ಉಳಿದ ಮೊತ್ತವನ್ನು ಕ್ರೆಡಾಯ್ ಭರಿಸಲಿದೆ ಎಂದು ಪುಷ್ಪರಾಜ್ ತಿಳಿಸಿದರು. ಮೇ. ಸುಮ್ಮಿತ್ಸ್ ಮೆಡಿಕಲ್ ಆಕ್ಸಿಜನ್ ಸಿಸ್ಟಮ್ ಸುಮಾರು 84 ಲಕ್ಷ ರೂ. ವೆಚ್ಚದಲ್ಲಿ ಲೇಡಿಗೋಷನ್ನಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲಿದೆ.
ಈ ಸಂದರ್ಭದಲ್ಲಿ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಪಾಲಿಕೆ ಆಯುಕ್ತ ಅಕ್ಷಯ್, ಕ್ರೆಡೈ ಕಾರ್ಯದರ್ಶಿ ಪ್ರಶಾಂತ್ ಸನಿಲ್, ಕೋಶಾಧಿಕಾರಿ ಗುರುಮೂರ್ತಿ, ಕಾರ್ಯಕಾರಿ ಸಮಿತಿ ಸದಸ್ಯ ಜಿತೇಂದ್ರ ಕೊಟ್ಟಾರಿ, ಎಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಅರುಣ ಪ್ರಭಾ, ಕಾರ್ಯದರ್ಶಿ ಅನಿಲ್ ಬಾಳಿಗಾ, ಕೆನರಾ ವಾಣಿಜ್ಯ ಮಂಡಳಿ ಅಧ್ಯಕ್ಷ ಐಸಾಕ್ ವಾಸ್, ಕಾರ್ಯದರ್ಶಿ ಶಶಿಧರ ಪೈ, ನಿರ್ಮಾಣಗಾರರ ಅಸೋಸಿಯೇಶನ್ ಅಧ್ಯಕ್ಷ ಮಹಾಬಲ ಕೊಟ್ಟಾರಿ ಉಪಸ್ಥಿತರಿದ್ದರು.
Credai to set up Oxygen plant in lady Goschen Hospital in Mangalore. The firm has donated Rs 84 lakhs for the set-up of the plant. The cheque was handed over to Naleen Kumar Kateel. DC, Bharath Shetty MLA, Vedavyas Kamath MLA were also present.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am