ಬ್ರೇಕಿಂಗ್ ನ್ಯೂಸ್
15-05-21 09:05 pm Udupi Correspondent ಕರಾವಳಿ
ಉಡುಪಿ, ಮೇ 15: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ತೌಕ್ತೆ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಕಂಡು ಕೇಳರಿಯದ ರೀತಿ ಸಮುದ್ರ ಅಬ್ಬರಿಸತೊಡಗಿದ್ದು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಎರಡು ದಿನ ಉಡುಪಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಮಾಡಲಾಗಿದೆ. ಮೇ 16 ಮತ್ತು 17 ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಿನಕ್ಕೆ 65-115 ಮಿಮೀ ಮಳೆ ಸಾಧ್ಯತೆಯಿದೆ.


ಇದೇ ವೇಳೆ, ಸಮುದ್ರ, ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಮಲ್ಪೆ- ಪಡುಕೆರೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಸಮುದ್ರ ಭೋರ್ಗರೆಯುತ್ತಿದ್ದು ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಮಲ್ಪೆ ಪಡುಕೆರೆಯಲ್ಲಿ ಮೀನುಗಾರಿಕಾ ರಸ್ತೆಗಳ ಮೇಲೆ ಸಮುದ್ರ ನೀರು ಬಂದಿದ್ದು ಕಡಲ ತೀರದ ನಿವಾಸಿಗಳಿಗೆ ಅಪಾಯದ ಮುನ್ನೆಚ್ಚರಿಕೆ ನೀಡಲಾಗಿದೆ.
ಸ್ಥಳಕ್ಕೆ ಉಡುಪಿ ಶಾಸಕ ರಘುಪತಿ ಭಟ್, ಪಡುಕೆರೆಯ ಮೀನುಗಾರರ ನಿವಾಸಗಳಿಗೆ ಭೇಟಿ ನೀಡಿದ್ದಾರೆ. ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಮನವೊಲಿಸಿದ್ದಾರೆ.


ಸಂಜೆಯ ನಂತರ ಮತ್ತೆ ನೀರಿನ ಅಬ್ಬರ ಇರುವ ಸಾಧ್ಯತೆ ಇರುವುದರಿಂದ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಮಲ್ಪೆಯ ಏಳೂರು ಮೊಗವೀರ ಭವನದಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ.
ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಎಂಟು ಮನೆಗಳಿಗೆ ಹಾನಿಯಾಗಿದ್ದು ಐದು ಮೀನುಗಾರಿಕೆ ಮತ್ತು ಕೃಷಿ ಶೆಡ್ ಗಳಿಗೆ ಭಾಗಶಃ ಹಾನಿಯಾಗಿದೆ. ಇದೇ ವೇಳೆ, ಕಾಪು ತಾಲೂಕಿನಲ್ಲಿ ರಮೇಶ್ (51) ಎಂಬ ಕೃಷಿಕ ವಿದ್ಯುತ್ ತಂತಿ ತುಳಿದು ಸಾವು ಕಂಡಿದ್ದಾರೆ. ಬ್ರಹ್ಮಾವರದ ಕೋಡಿ, ಕಾಪು ಸಮುದ್ರ ತೀರದಲ್ಲಿ ಹೈ ಎಲರ್ಟ್ ಮಾಡಲಾಗಿದೆ. ಅಗತ್ಯ ಬಿದ್ದರೆ ಆಯಾ ಭಾಗದಲ್ಲಿ ಪುನರ್ವಸತಿ ಕೇಂದ್ರ ಕಲ್ಪಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
With Cyclone Tauktae forming over the Arabian Sea, heavy rains continued to lash Udupi district since May 15 morning. Farmer dies of electrocution due to heavy rains of cyclone in Udupi.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am