ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.

ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am