ಬ್ರೇಕಿಂಗ್ ನ್ಯೂಸ್
21-05-21 11:03 pm Mangaluru Correspondent ಕರಾವಳಿ
ಮಂಗಳೂರು, ಮೇ 21: ಲಾಕ್ಡೌನ್ ಸಂದರ್ಭದಲ್ಲಿ ಉದ್ಯೋಗದ ಕಾರಣದಿಂದ ವಿದೇಶಗಳಲ್ಲಿ ನೆಲೆಸಿರುವ ಮಂಗಳೂರು ಮೂಲದ ಕುಟುಂಬಗಳ ತುರ್ತು ಸಂಕಷ್ಟಗಳಿಗೆ ಸ್ಪಂದಿಸಲು ಮಂಗಳೂರು ಪೊಲೀಸ್ ಕಮಿಷನರೇಟ್ ಮುಂದಾಗಿದ್ದು ಕೋವಿಡ್ ‘ಸಮನ್ವಯ’ ಹೆಲ್ಪ್ಲೈನ್ಗೆ ಆರಂಭಿಸಲಾಗಿದೆ.
ವಿದೇಶದಲ್ಲಿರುವ ಎನ್ಆರ್ಐಗಳ (ಅನಿವಾಸಿ ಭಾರತೀಯರು) ಜೊತೆ ‘ಸಮನ್ವಯ’ ಎಂಬ ವೆಬಿನಾರ್ ಮೂಲಕ ಸಂವಾದ ನಡೆಸಿದ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಇದಕ್ಕಾಗಿ ಸಹಾಯವಾಣಿ ಸಂಖ್ಯೆ (9480802300) ಚಾಲನೆ ನೀಡಿದರು.

ಕುವೈತ್, ಕೆನಡಾ, ಯುಎಸ್ಎ, ಯುಎಇ, ಕತಾರ್, ಒಮಾನ್, ಸೌದಿ ಅರೇಬಿಯಾ, ನ್ಯೂಝಿಲೆಂಡ್, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್, ಬಹರೈನ್, ಹಾಂಕಾಂಗ್, ಜರ್ಮನಿ ಸೇರಿದಂತೆ 20 ರಾಷ್ಟ್ರಗಳಿಂದ 100ಕ್ಕೂ ಅಧಿಕ ಮಂದಿ ವೆಬಿನಾರ್ನಲ್ಲಿ ಪಾಲ್ಗೊಂಡಿದ್ದು ಸಮಸ್ಯೆ ಇನ್ನಿತರ ವಿಚಾರಗಳ ಬಗ್ಗೆ ಹಂಚಿಕೊಂಡಿದ್ದಾರೆ. ಈಗಾಗ್ಲೇ ಮಂಗಳೂರಿನ ಸಂಘ ಸಂಸ್ಥೆಗಳು ಸ್ವಯಂಪ್ರೇರಿತರಾಗಿ ಕೋವಿಡ್ ಸಂಕಷ್ಟದ ಸಮಯದಲ್ಲಿ ನೆರವು ನೀಡುವ ಕಾರ್ಯ ಮಾಡುತ್ತಿದ್ದಾರೆ. ಆಹಾರ ವಿತರಣೆ, ರಕ್ತ ಮತ್ತು ಪ್ಲಾಸ್ಮಾ ಸಂಬಂಧಿಸಿದ ವ್ಯವಸ್ಥೆ, ಉಚಿತ ಆ್ಯಂಬುಲೆನ್ಸ್, ಆಸ್ಪತ್ರೆಗಳಲ್ಲಿ ಟೆಲಿ ಮೆಡಿಸಿನ್, ತುರ್ತು ಸಂದರ್ಭದಲ್ಲಿ ಖಾಸಗಿ ವಾಹನಗಳನ್ನು ಒದಗಿಸುವುದು, ಅಂತ್ಯಸಂಸ್ಕಾರ ಹೀಗೆ ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಇವನ್ನು ಸಮನ್ವಯ ಎಂಬ ಒಂದೇ ವೇದಿಕೆಯಡಿ ತರಲಾಗಿದೆ. ಇವುಗಳ ಮೂಲಕ ಎನ್ಆರ್ಐಗಳ ಕುಟುಂಬಸ್ಥರಿಗೂ ತುರ್ತು ಸೇವೆಗಳನ್ನು ಒದಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಸಾರ್ವಜನಿಕು ಸ್ಥಳೀಯವಾಗಿ ಕೊರೊನಾಗೆ ಸಂಬಂಧಿಸಿ ಸಮಸ್ಯೆಗಳಿದ್ದರೆ ಪೊಲೀಸ್ ಕಂಟ್ರೋಲ್ ರೂಮ್ (9480802321)ಗೆ ಕರೆ ಮಾಡಬಹುದು. ಲಾಕ್ಡೌನ್ ನಿಯಮ ಉಲ್ಲಂಘನೆ, ಔಷಧ ಮತ್ತು ಮೂಲಸೌಕರ್ಯಗಳಿಗೆ ಸಂಬಂಧಿಸಿದ ವಂಚನೆ, ಬ್ಲಾಕ್ಮೇಲ್ ಮೊದಲಾದ ಘಟನೆಗಳ ಬಗ್ಗೆ 112 ಸಹಾಯವಾಣಿಗೂ ಕರೆ ಮಾಡಬಹುದು ಎಂದು ಆಯುಕ್ತರು ತಿಳಿಸಿದ್ದಾರೆ.
ಅನಿವಾಸಿ ಭಾರತೀಯರು ಯಾವುದೇ ನೆರವಿಗಾಗಿ, ಸಹಾಯವಾಣಿ ಸಂಖ್ಯೆಗೆ ಸಂದೇಶ ಅಥವಾ ವಾಯ್ಸ್ ರೆಕಾರ್ಡ್, ವೀಡಿಯೋ ಸಂದೇಶ ಕಳುಹಿಸಿದಾಗ, ಸಂಬಂಧ ಪಟ್ಟವರಿಂದ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಮಂಗಳೂರು ಪೊಲೀಸರು ಸಲಹೆ ಕೇಳಿ ಸಹಾಯಕ್ಕೆ ಮುಂದಾಗಿರುವುದಕ್ಕೆ ಎನ್ಆರ್ಐಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ವಿದೇಶದಲ್ಲಿ ಸಿಲುಕಿರುವ ನಮ್ಮಂತಹ ಅನೇಕ ಮಂದಿಯ ಕುಟುಂಬಸ್ಥರು ಊರಿನಲ್ಲಿ ಗೊಂದಲದಲ್ಲಿದ್ದಾರೆ. ಅವರಿಗೆ ನೆರವಾಗುವ ಉದ್ದೇಶದಿಂದ ಪೊಲೀಸ್ ಆಯುಕ್ತರು ನೆರವಿಗೆ ಮುಂದಾಗಿರುವುದು ಶ್ಲಾಘನೀಯ ಎಂದು ಸಂವಾದದಲ್ಲಿ ಎನ್ಆರ್ ಐಗಳು ಪಾಲ್ಗೊಂಡವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Mangaluru city police on Friday, May 21 launched a helpline number 9480802300 for NRIs (Non-Resident Indian) and Indian diaspora of Mangaluru origin regarding the problem of their relatives and friends staying in Dakshina Kannada with regard to challenges posed by the Covid-19 pandemic. This helpline number will provide 24/7 service, stated a press release issued by the commissioner's office.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am