ಬ್ರೇಕಿಂಗ್ ನ್ಯೂಸ್
30-05-21 09:35 pm Mangaluru Correspondent ಕರಾವಳಿ
ಉಳ್ಳಾಲ, ಮೇ 30: ಕೊರೊನಾದಿಂದಾಗಿ ಇಡೀ ಸಮಾಜಕ್ಕೆ ಕತ್ತಲೆ ಕವಿದಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಸಮಾಜದಲ್ಲಿ ಮುಂಚೂಣಿಯಲ್ಲಿದ್ದು ಸರಕಾರದ ವ್ಯವಸ್ಥೆಗಳನ್ನ ಪ್ರತಿ ಮನೆ ಬಾಗಿಲಿಗೂ ತಲುಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಏಳು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಭಾನುವಾರ ಕುರ್ನಾಡು, ಇನೋಳಿ, ನಾಟೆಕಲ್, ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಭಿನಂದನೆ ಹಾಗೂ ಪ್ರೋತ್ಸಾಹ ಧನವನ್ನು ವಿತರಿಸಿ ಅವರು ಮಾತನಾಡಿದರು.

ಇಡೀ ವ್ಯವಸ್ಥೆಯನ್ನ ಮನೆ ಮನೆಗೆ ತಲುಪಿಸುವ ಕಾರ್ಯ ಆಶಾ ಕಾರ್ಯಕರ್ತೆಯರಿಂದಲೇ ಸಾಧ್ಯ. ಬೂತ್ ಮಟ್ಟದಲ್ಲೂ ಟಾಸ್ಕ್ ಫೋರ್ಸ್ ಅಗತ್ಯ. ಟಾಸ್ಕ್ ಪೋರ್ಸಿನ ಸದಸ್ಯರೆಲ್ಲರೂ ಎರಡು ದಿವಸಕ್ಕಾದರೂ ಒಟ್ಟು ಸೇರೋ ಅಗತ್ಯವಿದೆ ಎಂದು ಅವರು ಹೇಳಿದರು.
ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಾತನಾಡಿ, ನರೇಂದ್ರ ಮೋದಿಯವರು ಕೊರೊನಾದಂತಹ ಸಂದಿಗ್ಧತೆಯ ಕಾಲದಲ್ಲೂ ಉತ್ತಮ ಆಡಳಿತದೊಂದಿಗೆ, ಕೊರೊನಾ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅಲ್ಲದೆ ಕೊರೊನಾ ಸಂಕಷ್ಟ ಕಾಲದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾದದ್ದು. ಸಮಾಜದಲ್ಲಿ ಅವರನ್ನು ಗೌರವಿಸುವ ಕೆಲಸಗಳು ಆಗಬೇಕು ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ರಾಜ್ಯ ಅಲೆಮಾರಿ ಅರೆ ಅಲೆಮಾರಿ ನಿಗಮದ ರಾಜ್ಯ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ , ಮುಖಂಡರಾದ ಯಶವಂತ್ ಅಮೀನ್, ಗಾಯತ್ರಿ ಕಿಶೋರ್, ರಾಮಕೃಷ್ಣ ಪಟ್ಟೋರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ನವೀನ್ ಪಾದಲ್ಪಾಡಿ, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುಜಿತ್ ಶೆಟ್ಟಿ ಕಂಬ್ಲಪದವು, ಪ್ರಮುಖರಾದ ಪುರುಷೋತ್ತಮ ಕಲ್ಲಾಪು ಹಾಗೂ ಜೀವನ್ ಕುಮಾರ್ ತೊಕ್ಕೊಟ್ಟು ಮೊದಲಾದವರು ಉಪಸ್ಥಿತರಿದ್ದರು.
Seven years of Modi sarkar Pratap Simha Nayak distributed Financial aid to Asha Workers in Ullal.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am