ಬ್ರೇಕಿಂಗ್ ನ್ಯೂಸ್
02-06-21 01:01 pm Mangalore Correspondent ಕರಾವಳಿ
Photo credits : File
ಮಂಗಳೂರು, ಜೂ.2 : ಕೊರೊನಾ ಸೋಂಕಿನಿಂದ ಗುಣಮುಖರಾದವರ ಆರೋಗ್ಯದ ಬಗ್ಗೆ ನಿಗಾ ಇಡಲು ಜಿಲ್ಲೆಯ ಎಂಟು ವೈದ್ಯಕೀಯ ಮಹಾವಿದ್ಯಾಲಯಗಳ ಕಮ್ಯುನಿಟಿ ಮೆಡಿಸಿನ್ ವಿಭಾಗದ ತಜ್ಞರ ತಂಡವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನೇಮಕ ಮಾಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಪ್ರತಿ ದಿನ ಸುಮಾರು 800 ರಿಂದ 900 ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು ಅದರಲ್ಲಿ ಶೇಕಡಾ 5 ರಿಂದ 10 ರಷ್ಟು ರೋಗಿಗಳು ಜಿಲ್ಲೆಯ ವಿವಿಧ ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ವಿದ್ಯಾಲಯದ ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಕೋವಿಡ್ ಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ರೋಗಿಗಳು ಬ್ಲಾಕ್ ಫಂಗಸ್ ಸೋಂಕಿಗೆ ಒಳಗಾಗುವುದನ್ನು ತಡೆಗಟ್ಟಲು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ದಿನಾಂಕದಿಂದ ನಾಲ್ಕು ವಾರಗಳ ಕಾಲ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲು ವೈದ್ಯರ ತಂಡವನ್ನು ನೇಮಕ ಮಾಡಲಾಗಿದೆ.

ವೈದ್ಯರ ತಂಡವು ರೋಗಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಆರೋಗ್ಯದ ಬಗ್ಗೆ ವಿಚಾರಿಸಲಿದೆ. ಸಂಶಯ ಕಂಡುಬಂದಲ್ಲಿ ಪೂರ್ಣ ಮಾಹಿತಿಯನ್ನು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಗೆ ಇ-ಮೇಲ್ ಮೂಲಕ ತಕ್ಷಣ ತಿಳಿಸಬೇಕು. ಕ್ರೋಡೀಕೃತ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ದಿನಂಪ್ರತಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
Dakshina Kannada DC Dr. Rajendra Kumar from a team of Doctors to Monitor Covid Patients from the attack of Black Fungus.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am