ಬ್ರೇಕಿಂಗ್ ನ್ಯೂಸ್
03-06-21 10:47 am Udupi Correspondent ಕರಾವಳಿ
ಕಾರ್ಕಳ, ಜೂ.3 : ಕಾರ್ಕಳ ಪೇಟೆಯ ಹವಾಲ್ದಾರ್ ಬೆಟ್ಟು ಎಂಬಲ್ಲಿ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕೆ.ಪಿ.ಅನಂತ ಪ್ರಭು(84) ಮತ್ತು ಕೆಪಿ.ಪದ್ಮಾ ಪ್ರಭು(82) ಎಂದು ಗುರುತಿಸಲಾಗಿದೆ. ಮೇ 31ರಂದು ಮನೆಯಲ್ಲಿ ವಿಷ ಸೇವಿಸಿದ್ದು ತೀವ್ರ ಅಸ್ವಸ್ಥರಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ದಂಪತಿ ಕೊನೆಯುಸಿರೆಳೆದಿದ್ದಾರೆ.
ಅನಂತಪ್ರಭು ಜೂ.1ರ ಬೆಳಗ್ಗೆ ಮೃತರಾದರೆ, ಪದ್ಮಾ ಪ್ರಭು ಅದೇ ದಿನ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್ನಲ್ಲಿ ಉದ್ಯೋಗಿಯಾಗಿದ್ದ ಕೆ.ಪಿ. ಅನಂತ ಪ್ರಭು, ಉದ್ಯೋಗಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಕಾರ್ಕಳ ನಗರದಲ್ಲಿ ಪಾತ್ರೆ ಮಳಿಗೆ ನಡೆಸುತ್ತಿದ್ದರು.
ಈ ನಡುವೆ ಪತ್ನಿ ಪದ್ಮಾ ಪ್ರಭು ಅನಾರೋಗ್ಯಕ್ಕೆ ತುತ್ತಾಗಿದ್ದರು. ವೃದ್ಧಾಪ್ಯ ಮತ್ತು ಅನಾರೋಗ್ಯದಿಂದ ಬೇಸತ್ತ ದಂಪತಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಂಪತಿಗೆ ಇಬ್ಬರು ಪುತ್ರರಿದ್ದು ಒಬ್ಬಾತ ಭಾರತೀಯ ಸೇನೆಯಲ್ಲಿ ಕರ್ನಲ್ ಹುದ್ದೆಯಲ್ಲಿದ್ದಾರೆ.
In a tragic incident Elderly couple has been found dead at Home after consuming poison in Karkala. The reason for their suicide is still not yet know.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am