ಬ್ರೇಕಿಂಗ್ ನ್ಯೂಸ್
04-06-21 04:45 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ಇಂಡಿಯಾನಾ ಆಸ್ಪತ್ರೆಗೆ ನುಗ್ಗಿ ವೈದ್ಯರ ಮೇಲೆ ಕೈಮಾಡಿದ್ದ ಆರೋಪದಲ್ಲಿ ಕಂಕನಾಡಿ ಪೊಲೀಸರು ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಠಾಣೆಯ ಮುಂದೆ ಸೇರಿದ್ದು ಪೊಲೀಸರಿಗೆ ಘೆರಾವ್ ಹಾಕಿದ ಘಟನೆ ನಡೆದಿದೆ.



ನಾಗುರಿಯ ಕಂಕನಾಡಿ ನಗರ ಠಾಣೆಯ ಹೊರಭಾಗದಲ್ಲಿ ಕೋವಿಡ್ ಲಾಕ್ಡೌನ್ ಉಲ್ಲಂಘಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದು, ಸುಹೈಲ್ ಕಂದಕ್ ಮೇಲೆ ಪೊಲೀಸರು ಕೈಮಾಡಿ ಎಳಕೊಂಡು ಬಂದಿದ್ದಾರೆಂದು ಆರೋಪಿಸಿ ಘೆರಾವ್ ಹಾಕಿದ್ದಾರೆ. ಸ್ಥಳಕ್ಕೆ ಮಾಜಿ ಶಾಸಕ ಜೆ.ಆರ್. ಲೋಬೊ, ಐವಾನ್ ಡಿಸೋಜ, ಮಿಥುನ್ ರೈ ಆಗಮಿಸಿದ್ದು, ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ಕೂಡ ಆಗಮಿಸಿದ್ದು ಸೇರಿರುವ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ಸಮಾಧಾನ ಮಾಡುತ್ತಿದ್ದಾರೆ.





ಇಂಡಿಯಾನಾ ಆಸ್ಪತ್ರೆಯಲ್ಲಿ 15 ದಿನಗಳ ಹಿಂದೆ ಕೋರೊನಾ ಸೋಂಕಿತ ರೋಗಿ ಸಾವನ್ನಪ್ಪಿದ ಘಟನೆ ನಡೆದಿತ್ತು. ಅದೇ ದಿನ ಮಧ್ಯರಾತ್ರಿ ವೈದ್ಯರ ಚಿಕಿತ್ಸೆಯ ವೈಫಲ್ಯದಿಂದ ಸಾವು ಆಗಿದೆಯೆಂದು ಸುಹೈಲ್ ಕಂದಕ್ ಮತ್ತು ತಂಡ ಇಂಡಿಯಾನಾ ಆಸ್ಪತ್ರೆಗೆ ನುಗ್ಗಿ ವೈದ್ಯರನ್ನು ನಿಂದಿಸಿ, ಹಲ್ಲೆಗೆ ಯತ್ನಿಸಿತ್ತು ಎನ್ನುವ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಸುಹೈಲ್ ಕಂದಕ್ ಪ್ರಮುಖ ಆರೋಪಿ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸರು ಆತನನ್ನು ಠಾಣೆಗೆ ಬರುವಂತೆ ಕರೆದಿದ್ದರು. ಆದರೆ, ಆತ ವಿಚಾರಣೆಗೆ ಬಂದಿರಲಿಲ್ಲ. ಇಂದು ಮಧ್ಯಾಹ್ನ ಫಳ್ನೀರ್ ಬಳಿಯಿದ್ದ ಸುಹೈಲ್ ನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಒಯ್ದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ, ಯುವ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಬಳಿ ಸೇರಿದ್ದಾರೆ.
Mangalore Congress youth leader Suhail Kandak is taken to custody in connection to creating disruption at Indiana Hospital 14 days back. Hundreds of Youth Congress members and leaders gather at kankanady police station. Commissioner Shashi Kumar and Dcp Hariram Shankar are on the spot.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am