ಬ್ರೇಕಿಂಗ್ ನ್ಯೂಸ್
08-06-21 01:59 pm Udupi Correspondent ಕರಾವಳಿ
ಉಡುಪಿ, ಜೂನ್ 8: ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ಪ್ರಕಟವಾಗಿದೆ.
ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ನಂತರ ಹೋಮಕುಂಡದಲ್ಲಿ ಸುಟ್ಟಿದ್ದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿ ಗೆಳೆಯ ನಿರಂಜನ ಭಟ್ಗೆ ಶಿಕ್ಷೆ ಪ್ರಕಟವಾಗಿದೆ. ಮೂವರು ಪ್ರಮುಖ ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ನೀಡಲಾಗಿದ್ದು, ಬದುಕಿರುವವರೆಗೂ ಆರೋಪಿಗಳು ಜೈಲಿನಲ್ಲಿ ಕೊಳೆಯಬೇಕಾಗಿದೆ.
ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಜೂನ್ ೮ಕ್ಕೆ ಶಿಕ್ಷೆ ತೀರ್ಪು ಪ್ರಕಟ ದಿನಾಂಕ ಮುಂದೂಡಲಾಗಿತ್ತು. ಮೂರು ಪ್ರಮುಖ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.

ಉಡುಪಿ ಜಿಲ್ಲಾ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ನೀಡಿದ್ದು, ಭಾಸ್ಕರ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ಗೆ ಶಿಕ್ಷೆ ತೀರ್ಪು ನೀಡಿದ್ದು, ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ;
2016, ಜುಲೈ 28ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಬಳಿಕ ಮೃತದೇಹವನ್ನು ಹೋಮಕುಂಡಕ್ಕೆ ಹಾಕಿ ಸುಟ್ಟುಹಾಕಲಾಗಿತ್ತು.

ಭಾಸ್ಕರ್ ಶೆಟ್ಟಿ ಅವರ ತಾಯಿ ಗುಲಾಬಿ ಶೆಟ್ಟಿ ಅವರು ಮಣಿಪಾಲ ಠಾಣೆಗೆ ನೀಡಿದ ನಾಪತ್ತೆ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ, ನಂದಳಿಕೆಯ ನಿರಂಜನ ಭಟ್ ಹಾಗೂ ಸಾಕ್ಷ್ಯ ನಾಶ ಆರೋಪದ ಮೇಲೆ ಶ್ರೀನಿವಾಸ್ ಭಟ್ ಹಾಗೂ ರಾಘವೇಂದ್ರನನ್ನು ಬಂಧಿಸಿದ್ದರು.
ಕೊಲೆ ಪ್ರಕರಣದಲ್ಲಿ ರಾಜೇಶ್ವರಿ ಶೆಟ್ಟಿ ಜಾಮೀನಿನ ಮೇಲೆ ಬಿಡುಗಡೆಯಾದರೆ, ನವನೀತ ಶೆಟ್ಟಿ ಹಾಗೂ ನಿರಂಜನ್ ಭಟ್ ಜೈಲಿನಲ್ಲಿದ್ದರು.
The cold-blooded murder of the NRI entrepreneur from Indrali here, Bhaskar Shetty (52), had sent shock waves through the state. Shetty allegedly was killed, his body was cut into pieces and burnt on a platform meant for holding sacrificial fires. After a prolonged hearing, the district and sessions court here pronounced its judgment in the case on Tuesday, June 8. The court held three persons including the wife and son of the deceased as guilty of murder and awarded them life imprisonment.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am