ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am