ಬ್ರೇಕಿಂಗ್ ನ್ಯೂಸ್
22-06-21 09:32 pm Richard, Mangaluru ಕರಾವಳಿ
ಮಂಗಳೂರು, ಜೂನ್ 22: ಕಡೆಗೂ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ಗಳನ್ನು ಸಂಚರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ. ಬೆಳಗ್ಗೆ ಏಳು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆ ವರೆಗೆ 50 ಶೇ. ಸೀಟ್ ಭರ್ತಿಯೊಂದಿಗೆ ಬಸ್ ಸಂಚಾರ ಮಾಡಲು ಅವಕಾಶ ನೀಡಲಾಗಿದೆ. ಜೂನ್ 23 ರಿಂದಲೇ ಈ ಆದೇಶ ಜಾರಿಗೆ ಬರಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದೆ ಬೆಳಗ್ಗೆ 7 ರಿಂದ ಮಧ್ಯಾಹ್ನ 2ರ ವರೆಗೆ ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಕೂಡ ಅವಕಾಶ ಮಾಡಲಾಗಿದೆ. ಎರಡು ದಿನಗಳಲ್ಲಿ ಎರಡು ಬಾರಿ ಆದೇಶ, ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಯಿಂದ ಜಿಲ್ಲಾಡಳಿತದ ದಿಕ್ಕು ತಪ್ಪಿದ್ಯಾ ಎನ್ನುವ ಅನುಮಾನ ಬಂದಿದೆ.

ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯನ್ನು ನಡೆಸಿದ್ದಾರೆ.
ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಪೂರ್ಣ ಪ್ರಮಾಣದ ವಾರಾಂತ್ಯ ಕರ್ಫ್ಯೂ ಇರಲಿದೆ. ಹಾಲಿನ ಮಾರಾಟ ಕೇಂದ್ರಗಳನ್ನು ತೆರೆಯಲು ಮಾತ್ರ ಈ ಸಮಯದಲ್ಲಿ ಅವಕಾಶ ಕೊಡಲಾಗುವುದು. ಉಳಿದಂತೆ, ಯಾವುದೇ ಚಟುಚಟಿಕೆಗಳಿಗೆ ಅವಕಾಶವಿಲ್ಲ ಎಂದು ಕೋಟ ತಿಳಿಸಿದ್ದಾರೆ.
ಮದುವೆ ಹಾಗೂ ಸಮಾರಂಭಗಳಲ್ಲಿ 25 ಜನರಿಗೆ ಸೀಮಿತಗೊಳಿಸಿ ಮನೆಯಲ್ಲಿಯೇ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಧಾರ್ಮಿಕ ಕೇಂದ್ರ, ಕಲ್ಯಾಣ ಮಂಟಪ ಹಾಗೂ ಇತರೆ ಭವನಗಳಲ್ಲಿ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ ಎಂದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ದಿನಕ್ಕೆ 9,000 ದಿಂದ 10,000 ದ ವರೆಗೆ ಮಾಡಲಾಗುತ್ತಿದೆ. ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಸಹಕರಿಸಿ ಹೆಚ್ಚು ಪರೀಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಪ್ರತಾಪ್ಚಂದ್ರ ಶೆಟ್ಟಿ, ಹರೀಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನವಾನೆ, ಡಿ.ಸಿ.ಪಿ ಹರಿರಾಂ ಶಂಕರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಹಾಗೂ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.
With lockdown relaxations now in force, the district administration has issued an order in this direction. The below order will be implemented from June 23 to July 5. "Buses will be allowed to operate from Monday to Friday from 7 am to 1 pm with 50% capacity.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am