ಬ್ರೇಕಿಂಗ್ ನ್ಯೂಸ್
23-06-21 06:54 pm Richard, HK Mangaluru ಕರಾವಳಿ
ಉಳ್ಳಾಲ, ಜೂ.23: ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (30) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ.
ಇಂದು ಸಂಜೆ 4.30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ ಮೇಲಿಂದ ಏಕಾಏಕಿ ಸಮುದ್ರಕ್ಕೆ ಜಿಗಿದದ್ದನ್ನ ಸ್ಥಳೀಯರು ಕಂಡಿದ್ದಾರೆ.





ಅಲೆಗಳ ಜೊತೆ ಸೆಣಸಾಡಿದ ಈಜುರಕ್ಷಕರು !
ಪವನ್ ಹಾರಿದ್ದನ್ನು ನೋಡಿದ ಈಜು ರಕ್ಷಕರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ರುದ್ರಪಾದೆಯ ಕೆಳಭಾಗದಲ್ಲಿ ತೀವ್ರ ಆಳ ಇರುವುದರಿಂದ ಸುಳಿ ಇದ್ದು ಸಕಾಲದಲ್ಲಿ ರಕ್ಷಣೆ ಸಾಧ್ಯವಾಗಲಿಲ್ಲ.
ಬಳಿಕ ಶವ ಅಲೆಗಳಲ್ಲಿ ತೇಲಿ ಬಂದಿದ್ದನ್ನು ಗಮನಿಸಿದ ತಂಡ ಕಡಲಿನ ಅಬ್ಬರ ಜಾಸ್ತಿ ಇದ್ದರೂ ಗೃಹ ರಕ್ಷಕ ಸಿಬ್ಬಂದಿ ಪ್ರಸಾದ್ ಸುವರ್ಣ, ವೀನುಗಾರರಾದ ಸಾಗರ್, ಕರಾವಳಿ ಕಾವಲು ಪಡೆಯ ಮೋಹನ್, ಸುಜಿತ್, ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ ಸೇರಿ ಅಲೆಗಳೊಂದಿಗೆ ಸೆಣಸಾಡಿ ಮೃತದೇಹವನ್ನ ದಡಕ್ಕೆ ಎಳೆದಿದ್ದಾರೆ.
ಮೃತ ಪವನ್ ಪ್ರತಿಭಾನ್ವಿತರಾಗಿದ್ದು ಖಿನ್ನತೆಯಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಪವನ್ ಸೋಮೇಶ್ವರ ಆನಂದಾಶ್ರಮ ಪ್ರೌಢಶಾಲೆಯ ಹಿಂದಿ ಪಂಡಿತರೆಂದೇ ಖ್ಯಾತರಾದ ನಿವೃತ್ತ ಅಧ್ಯಾಪಕರಾದ ಕೆ.ವಿ. ಕೃಷ್ಣ ಭಟ್ ಅವರ ಮೊಮ್ಮಗನಾಗಿದ್ದು ವಿದ್ಯಾರ್ಥಿ ದಿಸೆಯಲ್ಲೇ ಪ್ರತಿಭಾನ್ವಿತನಾಗಿದ್ದ.
ಮೃತಪಟ್ಟ ಮಗನನ್ನು ಕಡಲ ಕಿನಾರೆಯಲ್ಲೇ ಆಲಂಗಿಸಿ ರೋದಿಸುತ್ತಿದ್ದ ತಾಯಿ ರಾಜೇಶ್ವರಿ ಅವರ ಗೋಳಾಟ ಅಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಪೊಲೀಸರನ್ನು ಮನ ಕಲಕುವಂತೆ ಮಾಡಿತ್ತು.
Mangalore Engineer commits suicide after falling into sea in Someshwara at Ullal . The deceased has been identified as Pawan Bhat (30).
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm