ಬ್ರೇಕಿಂಗ್ ನ್ಯೂಸ್
09-07-21 11:54 am Mangalore Correspondent ಕರಾವಳಿ
ಮಂಗಳೂರು, ಜುಲೈ 9 : ಕೋವಿಡ್ ಸೋಂಕಿನ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗಿ ಅಬ್ಬರ ಹೆಚ್ಚಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, ಶೇ.80 ರಷ್ಟು ಮಲೇರಿಯಾ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಡುಬರುತ್ತಿದೆ ಎಂಬ ಮಾಹಿತಿಯನ್ನು ಆರೋಗ್ಯ ಇಲಾಖೆ ನೀಡಿದೆ.
ರಾಜ್ಯದಲ್ಲಿ ಕಳೆದ ವರ್ಷ ಒಟ್ಟು 1,701 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದವು. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ 1,397 ಪ್ರಕರಣ ಪತ್ತೆಯಾಗಿದ್ದರೆ, ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ದಾಖಲೆಯ 1,306 ಪ್ರಕರಣಗಳು ಪತ್ತೆಯಾಗಿದ್ದವು. ಈ ಬಾರಿ ಕೂಡ ಮಲೇರಿಯಾ ಪ್ರಕರಣ ಹೆಚ್ಚುವ ಭೀತಿ ಎದುರಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಜೂನ್ ತಿಂಗಳಿನಿಂದ ಏರಿಕೆ ಆಗುತ್ತಿದೆ. ಮೇ ತಿಂಗಳ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ 277 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದವು. ಇದರಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿಯೇ 255 ಪ್ರಕರಣ ದಾಖಲಾಗಿವೆ. ಇದರ ಜತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗಿ ಅಬ್ಬರ ಜೋರಾಗುತ್ತಿದ್ದು ಮೇ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ 122 ಪ್ರಕರಣ ಪತ್ತೆಯಾಗಿವೆ.


2019ರಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ 2,593 ಮಲೇರಿಯಾ ಪ್ರಕರಣ ದಾಖಲಾಗಿದ್ದವು. ಜಿಲ್ಲೆಯಲ್ಲಿ 2,797 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಪಾಲಿಕೆ ಈ ಬಾರಿ ಗ್ರಾಮೀಣ ಪ್ರದೇಶಗಳಲ್ಲಿ ಮಲೇರಿಯಾ ಹಾಗೂ ಡೆಂಗಿ ರೋಗದ ಬಗ್ಗೆ ಮತ್ತು ಸೊಳ್ಳೆಗಳ ನಿಯಂತ್ರಣದ ವಿಚಾರದಲ್ಲಿ ಜಾಗೃತಿ ಮೂಡಿಸುವ ಹೆಜ್ಜೆ ಇಟ್ಟಿದೆ.
‘ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗಿ ಬಗ್ಗೆ ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಕ್ಷೇತ್ರ ಹಾಗೂ ಮನೆ ಭೇಟಿ, ಲಾರ್ವಾ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ವೈದ್ಯಾಧಿಕಾರಿ ನೇತೃತ್ವದಲ್ಲಿ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ಚಂದ್ರ ಕುಲಾಲ್ ತಿಳಿಸಿದರು.


ದಿನದ 24 ಗಂಟೆ ಸೇವೆ ವ್ಯವಸ್ಥೆ
ಕೋವಿಡ್ ಸೋಂಕು ಒಮ್ಮೆ ಬಾಧಿಸಿ ಹೋಗಬಹುದು, ಆದರೆ ಡೆಂಗಿ, ಮಲೇರಿಯಾ ಪದೇ ಪದೇ ಬರಬಹುದು. ಮಳೆಗಾಲದಲ್ಲಿ ಸೊಳ್ಳೆಗಳಿಂದ ರಕ್ಷಣೆ ಪಡೆಯಬೇಕು. ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ಬಿಟ್ಟು ಬಿಟ್ಟು ಬರುವ ಚಳಿ ಜ್ವರ, ತಲೆ ನೋವು, ಮೈಕೈ, ನೋವು ಇದ್ದರೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆ ದಿನದ 24 ಗಂಟೆ ಉಚಿತ ಸೇವೆ ನೀಡುತ್ತಿದೆ. ಮೊಬೈಲ್ 9448556872 ಸಂಪರ್ಕಿಸಿ ಸೇವೆ ಪಡೆಯಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
Amid coronavirus Dakshina Kannada stands first in reporting Malaria and Dengue cases in State with 80 percent of cases being detected from Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm