ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm