ಬ್ರೇಕಿಂಗ್ ನ್ಯೂಸ್
18-07-21 07:26 pm Mangaluru Correspondent ಕರಾವಳಿ
ಮಂಗಳೂರು, ಜು.18: ಕೋವಿಡ್ ಸೋಂಕು ತಡೆಯುವ ನಿಟ್ಟಿನಲ್ಲಿ ಷರತ್ತಿಗೆ ಒಳಪಟ್ಟು ಜು.19 ರಿಂದ ಕೇರಳದ ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಾವಿರಾರು ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಸರಗೋಡು - ಮಂಗಳೂರು ನಡುವೆ ಬಸ್ ಸಂಚಾರಕ್ಕೆ ಜುಲೈ 19 ರಿಂದ ಪರತ್ತಿಗೊಳಪಟ್ಟು ಅನುಮತಿಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕೆಯನ್ನು ಕನಿಷ್ಠ 1(ಒಂದು) ಡೋಸ್ ಪಡೆದಿರಬೇಕು. ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ಆಯಾ ಬಸ್ ನ
ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು.
ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಟೈಸರ್, ಸಾರ್ವಜನಿಕ ಅಂತರ) ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC buses will be allowed to operate between Kasargod and Mangaluru from July 19.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm