ಬ್ರೇಕಿಂಗ್ ನ್ಯೂಸ್
05-08-21 12:01 pm Udupi Police ಕರಾವಳಿ
ಉಡುಪಿ, ಆಗಸ್ಟ್ 5: ಕೊರೋನಾ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ.ಜಗದೀಶ್ ಸೆಕ್ಷನ್ 144(3) ಜಾರಿ ಮಾಡಿದ್ದಾರೆ. ಇದರಂತೆ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಅಲ್ಲದೆ, ಸಾರ್ವಜನಿಕ ಚಟುವಟಿಕೆಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಪಬ್ ಗಳಿಗೆ ಅವಕಾಶ ಇಲ್ಲ. ಈಜು ಕೊಳದಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಮಾತ್ರ ಅವಕಾಶ, ಸಾರ್ವಜನಿಕ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಮೈದಾನ, ಕ್ರೀಡಾಂಗಣದಲ್ಲಿಯೂ ಕ್ರೀಡಾಪಟುಗಳಿಗೆ ಮಾತ್ರ ಅಭ್ಯಾಸಕ್ಕೆ ಅವಕಾಶ ನೀಡಲಾಗಿದೆ.


ಇದೇ ವೇಳೆ ಎಲ್ಲ ರೀತಿಯ ರಾಜಕೀಯ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿಷೇಧ ಹೇರಿದ್ದಾರೆ. ಜನರು ಒಟ್ಟು ಸೇರುವುದನ್ನು ನಿಷೇಧಿಸುವ ಸಲುವಾಗಿ ಮದುವೆ ಇನ್ನಿತರ ಕೌಟುಂಬಿಕ ಕಾರ್ಯಕ್ರಮ 100 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ದೇವಸ್ಥಾನದಲ್ಲಿ ಜನಸಂದಣಿ ಸೇರದಂತೆ ಜಾತ್ರೆ, ಉತ್ಸವ, ಮೆರವಣಿಗೆ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ನಿಂತು ಪ್ರಯಾಣಿಸುವಂತಿಲ್ಲ. ನಿಂತು ಪ್ರಯಾಣ ಮಾಡಿದಲ್ಲಿ ಅವರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಚಿತ್ರಮಂದಿರದಲ್ಲಿ ಶೇಕಡಾ 50 ವೀಕ್ಷಕರಿಗೆ ಮಾತ್ರ ಅವಕಾಶ ಇರಲಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಏರ್ಪಡಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
Spike in corona cases Udupi district announces night curfew with strict rules.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm