ಬ್ರೇಕಿಂಗ್ ನ್ಯೂಸ್
11-08-21 04:57 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಕೋವಿಡ್ 3ನೇ ಅಲೆಯ ಸಾಧ್ಯತೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ನಡೆಯುವ ದಸರಾ ಹಬ್ಬದ ವರೆಗೂ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯ ಯಾವುದೇ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶ ಇರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೇ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.
ತುಳುನಾಡಿನ ಪ್ರಮುಖ ಆಚರಣೆಯಾದ ನಾಗರ ಪಂಚಮಿಯ ದಿನದಂದೂ ದೇವಾಲಯಗಳಲ್ಲಿ ಭಕ್ತರಿಂದ ವಿಶೇಷ ಪೂಜೆ, ಸೇವೆಗಳಿಗೆ ಅವಕಾಶವಿರುವುದಿಲ್ಲ. ಸಾಂಪ್ರದಾಯಿಕವಾಗಿ ಅರ್ಚಕರಿಂದ ನಡೆಯುವ ಧಾರ್ಮಿಕ ವಿಧಿಗಳು ಎಂದಿನ ರೀತಿ ನಡೆಸಬಹುದು. ಅಲ್ಲದೆ, ನಾಗಬನ ಹಾಗೂ ಕುಟುಂಬದ ಮನೆಗಳಲ್ಲಿ ಆಚರಿಸಲಾಗುವ ಪೂಜೆಗಳನ್ನು ಕೂಡ ಕೋವಿಡ್ ಮಾರ್ಗಸೂಚಿಯೊಂದಿಗೆ ಹೆಚ್ಚು ಜನ ಸೇರದಂತೆ ನಡೆಸಬೇಕು. ಸ್ಥಳೀಯ ಪಿಡಿಓಗಳ ಮೇಲ್ವಿಚಾರಣೆಯಲ್ಲಿ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯನ್ನು ಕೂಡ ನಿಗದಿತ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆ ನಡೆಸಲಾಗುತ್ತದೆ. ಕೃಷ್ಣ ಜನ್ಮಾಷ್ಠಮಿ, ಗಣೇಶ ಹಬ್ಬದ ಸಂದರ್ಭದಲ್ಲೂ ಸಾರ್ವಜನಿಕವಾಗಿ ಚಪ್ಪರ, ಶಾಮಿಯಾನ ಹಾಕಿ ಅಥವಾ ಮೆರವಣಿಗೆಯೊಂದಿಗೆ ನಡೆಸಲು ಅವಕಾಶ ನೀಡದಿರಲು ಚಿಂತನೆ ಮಾಡಲಾಗಿದೆ ಎಂದು ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.
ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ. ಪರೀಕ್ಷೆಗೆ ತೆರಳುವವರು ಇದ್ದರೆ ಹಾಲ್ ಟಿಕೆಟ್ ತೋರಿಸಿ ಪ್ರಯಾಣ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಶಾಲೆ- ಕಾಲೇಜು ವಿಳಂಬ ಸಾಧ್ಯತೆ ;
ಈಗಾಗಲೇ ಮುಖ್ಯಮಂತ್ರಿಯವರು ಶಾಲೆ ಕಾಲೇಜು ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಉಳಿದ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಆರಂಭವಾದರೂ ದ.ಕ. ಸೇರಿದಂತೆ ಕೋವಿಡ್ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ದ.ಕ. ಜಿಲ್ಲಾಸ್ಪತ್ರೆಯಾದ ವೆನ್ಲಾಕ್ನಲ್ಲಿ 32 ಬೆಡ್ಗಳ ಹೈಟೆಕ್ ಐಸಿಯು ಸಿದ್ಧಗೊಂಡಿದ್ದು, ಸಿಎಂ ಆಗಿ ಮೊದಲ ಬಾರಿಗೆ ಜಿಲ್ಲೆಗೆ ಗುರುವಾರ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐಸಿಯು ಘಟಕವನ್ನು ಉದ್ಘಾಟಿಸಲಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.
ಆ.15ರಿಂದ ಮತ್ತೆ ಲಾಕ್ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ;
ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವುದು ನಿಜ. ಆದರೆ ಅತ್ಯಂತ ಸುಸಜ್ಜಿತ ಆಧುನಿಕ ಆಸ್ಪತ್ರೆಗಳು, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಕಾಸರಗೋಡು ಸೇರಿದಂತೆ ಕೇರಳ ರಾಜ್ಯದ ಜತೆ ದ.ಕ. ಜಿಲ್ಲೆ ಗಡಿ ಹಂಚಿಕೊಂಡಿರುವುದರಿಂದ ಸಹಜವಾಗಿ ಪಾಸಿಟಿವಿಟಿ ದರದಲ್ಲಿ ಹೆಚ್ಚಳ ಕಂಡುಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಪ್ರತಿನಿತ್ಯ ಕೋವಿಡ್ ತಪಾಸಣಾ ಸಂಖ್ಯೆಯೂ ಹೆಚ್ಚುತ್ತಿದೆ. ನಿನ್ನೆ ಒಂದು ದಿನದಲ್ಲಿ 9900 ಮಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮತ್ತೆ ಲಾಕ್ಡೌನ್ ಮಾಡುವಂತಹ ಪರಿಸ್ಥಿತಿ ಇಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪ್ರತಿಕ್ರಿಯಿಸಿದ್ದಾರೆ.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
Processions and installation of idols in public places during Ganesh Chaturthi is restricted and celebrations are restricted to a day said Mangalore Dc Rajendra Kumar. The guidelines will probably be applicable till Dasara. Deputy commissioner (DC) Dr K V Rajendra said, “Public gathering and processions are completely restricted during the upcoming festival season. The situation will be analysed and depending upon the situation, the guidelines may be made stricter or relaxed.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm