ಬ್ರೇಕಿಂಗ್ ನ್ಯೂಸ್
12-08-21 01:30 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಮಕ್ಕಳಿಗೆ ಸೋಂಕು ಹರಡದಂತೆ ನೋಡಿಕೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಕ್ಕಾಗಿ ಮಕ್ಕಳಿಗೆ ಪೌಷ್ಟಿಕಾಹಾರ ನೀಡುವುದು, ಇಮ್ಯುನಿಟಿ ಹೆಚ್ಚಿಸುವಲ್ಲಿ ನಿಗಾ ಇಡುವಂತೆ ಕ್ರಮ ವಹಿಸಲಾಗಿದೆ. ಅಲ್ಲದೆ, ಮಕ್ಕಳಿಗಾಗಿ ಹೆಚ್ಚುವರಿ ಪೀರಿಯಾಡಿಕ್ ಐಸಿಯು ತೆರೆಯಲು ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿ ಆದಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ, ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಐಸಿಯು ಘಟಕವನ್ನು ಉದ್ಘಾಟಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಮಕ್ಕಳಲ್ಲಿ ಈಗ ಕೊರೊನಾ ಹರಡುತ್ತಿದೆ, ಕಳೆದ ಐದು ದಿನಗಳಲ್ಲಿ 300ಕ್ಕೂ ಹೆಚ್ಚು ಮಕ್ಕಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕು ಕಂಡುಬಂದಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಉಡುಪಿ ಮತ್ತು ಹಾವೇರಿ ಜಿಲ್ಲೆಯಲ್ಲಿ ವಾತ್ಸಲ್ಯ ಯೋಜನೆ ಆರಂಭಿಸಲಾಗಿದೆ. ಇದನ್ನು ರಾಜ್ಯಾದ್ಯಂತ ಜಾರಿಗೆ ತರಲಾಗುವುದು. ಇದಲ್ಲದೆ ಮಕ್ಕಳಿಗೆ ಸೋಂಕು ಹರಡದಂತೆ ನೋಡಿಕೊಳ್ಳುವುದು ಮಹತ್ವದ ಜವಾಬ್ದಾರಿ. ಹೆಚ್ಚು ಸವಾಲಿನಿಂದ ಕೂಡಿರುವ ಈ ವಿಚಾರದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಮಕ್ಕಳಿಗೆ ಯಾವುದೇ ಆರೋಗ್ಯ ತೊಂದರೆ ಎದುರಾದರೂ ಎಚ್ಚರ ವಹಿಸಬೇಕು. ಮೊದಲು ತಪಾಸಣೆ ನಡೆಸಬೇಕು. ತಾಲೂಕು ಆಸ್ಪತ್ರೆಯಲ್ಲಿ ಕೂಡ ಐಸಿಯು ತೆರೆಯಲಾಗುವುದು. ಇದಲ್ಲದೆ, ಸವಾಲು ಎದುರಿಸುವ ನಿಟ್ಟಿನಲ್ಲಿ ಈಗ ಇರುವ ಖಾಸಗಿ ಸೇರಿದಂತೆ ಒಟ್ಟು ಐಸಿಯುಗಳ ಪೈಕಿ 50 ರಷ್ಟನ್ನು ಮೀಸಲು ಇಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕೇರಳ ಭಾಗದಿಂದ ಬರುವ ಮಂದಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ. ಎರಡು ಡೋಸ್ ಪಡೆದವರು ಕೂಡ ನೆಗೆಟಿವ್ ಸರ್ಟಿಫಿಕೇಟ್ ಇಟ್ಟುಕೊಂಡೇ ಬರಬೇಕು ಎಂದು ಪ್ರಶ್ನೆ ಒಂದಕ್ಕೆ ಉತ್ತರ ನೀಡಿದರು.
ವೆನ್ಲಾಕ್ ನಲ್ಲಿ ಅತ್ಯಾಧುನಿಕ ಐಸಿಯು ಘಟಕ
ವೆನ್ಲಾಕ್ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 1.24 ಕೋಟಿ ರೂ. ವೆಚ್ಚದಲ್ಲಿ 35 ಬೆಡ್ ಸಾಮರ್ಥ್ಯದ ಐಸಿಯು ಘಟಕ ನಿರ್ಮಿಸಲಾಗಿದೆ. ಐಸಿಯು ಕೇಂದ್ರವು ವೆಂಟಿಲೇಟರ್ ಸಹಿತವಾಗಿದ್ದು ಮಕ್ಕಳು ಮತ್ತು ಹಿರಿಯರಿಗೆ ಎರಡೂ ವಿಭಾಗದ ಮಂದಿಗೆ ಸೂಕ್ತವಾಗುವ ರೀತಿ ಐಸಿಯು ಘಟಕ ನಿರ್ಮಿಸಲಾಗಿದೆ. ಅಲ್ಲದೆ, ಆಲ್ಟ್ರಾ ಮಾನಿಟರ್ ವೆಂಟಿಲೇಟರ್ ಯೂನಿಟ್ ಇದಾಗಿದ್ದು ಒಂದೇ ಜಾಗದಲ್ಲಿ ಅವುಗಳ ಚಟುವಟಿಕೆ ಬಗ್ಗೆ ನಿಗಾ ಇಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್ಒ ಡಾ. ಕಿಶೋರ್ ಕುಮಾರ್ ಹಾಜರಿದ್ದರು.
Basavaraj S Bommai, chief minister (CM) of the state inaugurated the new ICU of medicine section of district Wenlock hospital in the heart of the city on Thursday August 12.The medicine section has a 32-bed ICU which is biult at a cost of Rs 124.5 lac grant under SDRF. The new facility is in addition to already functioning 35-bed ICU, which is built under Smart City project.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm