ಬ್ರೇಕಿಂಗ್ ನ್ಯೂಸ್
14-08-21 01:56 pm Udupi Correspondent ಕರಾವಳಿ
ಉಡುಪಿ, ಆ.14: ಕೋವಿಡ್ ಕಾರಣದಿಂದ ಸಂಚಾರವನ್ನು ಮೊಟಕುಗೊಳಿಸಿದ್ದ ಬೆಂಗಳೂರು ಯಶವಂತಪುರ- ಕಾರವಾರ (ರೈಲು ನಂ. 06211/12) ಸಂಚರಿಸುವ ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್ ಕೋಚ್ ಸಹಿತ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರ ಬೆಳಗಿನ ರೈಲು ಸಂಚಾರವನ್ನು ಕಳೆದ ಮೇ 3 ರಿಂದ ಮಂಗಳೂರಿನಿಂದ ಕಾರವಾರದ ತನಕದ ಸಂಚಾರವನ್ನು ರೈಲ್ವೆ ಇಲಾಖೆ ಮೊಟಕುಗೊಳಿಸಿತ್ತು. ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ನಡೆಸುತ್ತಿತ್ತು. ಇದೀಗ ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ವಿಸ್ಟಾಡೋಮ್ನೊಂದಿಗೆ ರೈಲನ್ನು ಕಾರವಾರದಿಂದ ಪುನರಾರಂಭಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಉಡುಪಿ- ಚಿಕ್ಕಮಗಳೂರು ಸಂಸತ್ ಸದಸ್ಯೆಯಾಗಿರುವ ಶೋಭಾ ಕಂದ್ಲಾಜೆ ಅವರನ್ನು ಒತ್ತಾಯಿಸಿದ್ದರು.







ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ -ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರೈಲ್ವೆ ಸಚಿವರು ಕಾರವಾರ- ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೀಗ ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು ಆ.16ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಸೇರ್ಪಡೆಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The train will resume between Bengaluru-Karava, which was shut down due to Corona anxiety. A train service will be in operation during the day from August 16. On the request of Union Minister of State Shobha Karandlaje, the Bangalore-Karwar train will resume. Minister of State for Agriculture, Shobha Karandlaje has appealed for the installation of the Vistadome coach on this route.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am