ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am