ಬ್ರೇಕಿಂಗ್ ನ್ಯೂಸ್
19-08-21 03:41 pm Udupi Correspondent ಕರಾವಳಿ
ಕುಂದಾಪುರ, ಆಗಸ್ಟ್ 19: ಪದವಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ಗಾಯಗೊಂಡರೂ, ವಿದ್ಯಾರ್ಥಿಗಳು ಆ್ಯಂಬುಲೆನ್ಸ್ ಮೂಲಕ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ ಪ್ರಸಂಗ ಗಂಗೊಳ್ಳಿಯಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿಗಳಾದ ಶಿರೂರು ನಿವಾಸಿ ಮಸಾಯಿದ್ ಮತ್ತು ಗಂಗೊಳ್ಳಿ ನಿವಾಸಿ ವಾಜಿದ್ ಬೈಕ್ ಅಪಘಾತದಲ್ಲಿ ಗಾಯಗೊಂಡರೂ ಆಂಬುಲೆನ್ಸ್ ನಲ್ಲೇ ಪರೀಕ್ಷಾ ಕೇಂದ್ರಕ್ಕೆ ಬಂದು ಅಚ್ಚರಿ ಮೂಡಿಸಿದ್ದಾರೆ.
ಪ್ರಥಮ ವರ್ಷದ ಪದವಿ ಪರೀಕ್ಷೆಗಾಗಿ ಬೈಕ್ ನಲ್ಲಿ ಬಂದಿದ್ದ ಮಸಾಯಿದ್ ಗಂಗೊಳ್ಳಿಗೆ ತೆರಳಿ ತಮ್ಮ ಸ್ನೇಹಿತ ವಾಜಿದ್ ನನ್ನು ಕರೆದುಕೊಂಡು ಕಾಲೇಜಿಗೆ ಸಾಗುತ್ತಿದ್ದಾಗ ಈ ಅವಘಡ ನಡೆದಿದೆ. ಗಂಗೊಳ್ಳಿ-ತ್ರಾಸಿ ಮಾರ್ಗದ ಕೊಡಪಾಡಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಗಂಗೊಳ್ಳಿಯ ಆಪತ್ಬಾಂಧವ ಆ್ಯಂಬುಲೆನ್ಸ್ ನ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ.
ಅಪಘಾತದಲ್ಲಿ ಗಾಯಗಳಾಗಿದ್ದರೂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಆಂಬುಲೆನ್ಸ್ ಮೂಲಕ ವಿದ್ಯಾರ್ಥಿಗಳಿಬ್ಬರೂ ಭಂಡಾರ್ಕಾರ್ಸ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿಗಳು ಮತ್ತೆ ಚಿಕಿತ್ಸೆ ಪಡೆಯಲಿದ್ದಾರೆ.
Kundapura two Students attend exams coming by ambulance after bike accident. After writing exams both were taken to hospital for further treatment.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am