ಬ್ರೇಕಿಂಗ್ ನ್ಯೂಸ್
30-08-21 12:24 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 30: ಮುಜರಾಯಿ ಇಲಾಖೆಗೆ ಒಳಪಟ್ಟ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ದೇವಸ್ಥಾನಕ್ಕೆ ಬರುವ ಹಿಂದು ಭಕ್ತರಿಗೆ ಮಾತ್ರ ಪಾರ್ಕಿಂಗ್ ಅವಕಾಶ ಎಂದು ಬೋರ್ಡ್ ಹಾಕಲಾಗಿದ್ದು ವಿವಾದಕ್ಕೆ ಕಾರಣವಾಗಿದೆ.
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಮೈದಾನದಲ್ಲಿ ಫ್ಲೆಕ್ಸ್ ಹಾಕಿದ್ದು ದೇವಸ್ಥಾನದ ಮುಂದಿನ ದೇವರಮಾರು ಗದ್ದೆಯಲ್ಲಿ ಮುಂದಿನ ದಿನಗಳಲ್ಲಿ ಹಿಂದು ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಹಿಂದು ಭಕ್ತಾದಿಗಳ ಹೊರತಾಗಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವಂತಿಲ್ಲ. ಇದನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಒಂದು ವೇಳೆ ಪಾರ್ಕಿಂಗ್ ಮಾಡಿ ಹೋದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದು ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರವೋ, ಕೆಲವು ಸದಸ್ಯರು ಸೇರಿ ಬೋರ್ಡ್ ಹಾಕಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.
ದೇವಸ್ಥಾನದ ಮುಂದಿನ ವಿಶಾಲ ಮೈದಾನದಲ್ಲಿ ಇತರ ಧರ್ಮೀಯರು ಕೂಡ ವಾಹನ ಪಾರ್ಕ್ ಮಾಡಿ ಹೋಗುತ್ತಿದ್ದು ಈ ವಿಚಾರ ಕೆಲವೊಮ್ಮೆ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಫ್ಲೆಕ್ಸ್ ಮೂಲಕ ಎಚ್ಚರಿಕೆ ನೀಡಲಾಗಿದ್ದು ಈ ಬಗ್ಗೆ ಪರ ವಿರೋಧ ಚರ್ಚೆಯೂ ನಡೆಯುತ್ತಿದೆ.
Puttur Mahalingeshwara Temple parking board sparks controversy after it states the parking is only meant for Hindus and not for other religion people.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm