ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ತೆರವಿಗೆ ಶಾಸಕ ವೇದವ್ಯಾಸ ಕಾಮತ್ ಸಿಎಂಗೆ ಮನವಿ

03-09-21 07:05 pm       Headline Karnataka News Network   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ‌

ಮಂಗಳೂರು, ಸೆ.3 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ‌

ಪ್ರಮುಖವಾಗಿ ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನವಾಗಿದೆ. ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೆ, ವೃತ್ತಿಪರ ನೌಕರರು, ದಿನಗೂಲಿ ಕೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣ ಪುಟ್ಟ ಉದ್ಯಮ ಸೇರಿದಂತೆ ಇನ್ನಿತರ ವರ್ಗದ ಜನರು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ವಾರಾಂತ್ಯದ ಕರ್ಫ್ಯೂ ರದ್ದು ಪಡಿಸುವಂತೆ ಸಾರ್ವಜನಿಕ ವಲಯದ ಮನವಿಯ ಮೇರೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.  

ಕೋವಿಡ್ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಸ್ವಯಂಪ್ರೇರಿತರಾಗಿ ಪಾಲಿಸಿ ಕೋವಿಡ್ ನಿಯಂತ್ರಣಕ್ಕಾಗಿ ಕೈಜೋಡಿಸುವಂತೆ ಶಾಸಕ ಕಾಮತ್ ಮನವಿ ಮಾಡಿದ್ದಾರೆ.

Mangalore MLA Vedavyas Kamath and Kota requests CM Bommai to discard Curfew in Dakshina Kannada