ಬ್ರೇಕಿಂಗ್ ನ್ಯೂಸ್
05-09-21 11:08 pm Headline Karnataka News Network ಕರಾವಳಿ
ಬಂಟ್ವಾಳ, ಸೆ.5 : ತಾಲೂಕಿನ ಸಜೀಪಮೂಡ ಗ್ರಾಮದ ಅನ್ನಪಾಡಿ ಬಾಲಗಣಪತಿ ದೇವಾಲಯದ ಬಳಿಯ ದಿ. ಮೋನಪ್ಪ ಪೂಜಾರಿ ಎಂಬವರ ತೋಟದಲ್ಲಿ ಶಿಲಾಶಾಸನ ಪತ್ತೆಯಾಗಿದ್ದು 15ನೇ ಶತಮಾನದ ಬಂಗರಸರಿಗೆ ಸೇರಿದ್ದು ಎನ್ನುವುದು ತಿಳಿದುಬಂದಿದೆ.
ಶಾಸನವನ್ನು ಇತ್ತೀಚೆಗೆ ಬಂಟ್ವಾಳ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ ಹಾಗೂ ಬಂಟ್ವಾಳ ತಾಪಂ ಮಾಜಿ ಅಧ್ಯಕ್ಷ ಯಶವಂತ ದೇರಾಜೆ ಪತ್ತೆ ಮಾಡಿದ್ದರು. ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಮಾರ್ಗದರ್ಶನದಲ್ಲಿ ಈ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದು, 15 ನೇ ಶತಮಾನದ ಈ ಶಾಸನವು ಜೈನ ಮನೆತನದ ಬಂಗರಸರಿಗೆ ಸೇರಿದ್ದು ಎಂದು ತಿಳಿಸಿದ್ದಾರೆ.
ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನವು 138 ಸೆಂ.ಮೀ. ಎತ್ತರ ಹಾಗೂ 76 ಸೆಂ.ಮೀ ಅಗಲವಿದೆ. ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನವು 17 ಸಾಲುಗಳನ್ನು ಹೊಂದಿದೆ. ಶಾಸನದ ಮೇಲ್ಭಾಗದಲ್ಲಿ ಸೂರ್ಯ-ಚಂದ್ರರಿದ್ದು, ಮಧ್ಯ ಭಾಗದಲ್ಲಿ ಪ್ರಭಾವಳಿ ಸಹಿತ ಶಿವಲಿಂಗ ಹಾಗೂ ಇದರ ಬಲ ಭಾಗದಲ್ಲಿ ಶಿವಲಿಂಗವನ್ನು ಪೂಜಿಸುತ್ತಿರುವ ಪುರುಷಾಮೃಗ ಮತ್ತು ಎಡ ಭಾಗದಲ್ಲಿ ನಂದಿಯ ಉಬ್ಬು ಕೆತ್ತನೆ ಇದೆ.
ಪ್ರಾಯಶಃ ಇದುವರೆಗೆ ಲಭ್ಯವಾಗಿರುವ ಕರ್ನಾಟಕದ ಶಾಸನಗಳಲ್ಲಿ ಪುರುಷಾಮೃಗದ ಕೆತ್ತನೆ ಇದೇ ಮೊದಲು ಪತ್ತೆಯಾಗಿರುವುದೆಂದು ಸಂಶೋಧನಾರ್ಥಿ ಅಭಿಪ್ರಾಯ ಪಟ್ಟಿರುತ್ತಾರೆ.
ಶಾಸನದಲ್ಲಿ ಜಯಾಭ್ಯುದಯ ಶಾಲಿವಾಹನ ಶಕವರುಷ 1405 ನೆಯ ಶೋಭಕೃತ ಸಂವತ್ಸರದ ಜೇಷ್ಟ ಶುದ್ಧ 1 ಬುಧವಾರ ಎಂದು ಉಲ್ಲೇಖವಿದ್ದು ಇದು ಕ್ರಿ.ಶ. 1483 ಮೇ 17 ಬುಧವಾರಕ್ಕೆ ಸರಿ ಹೊಂದುತ್ತದೆ. ಬಂಗ ದೊರೆ ಪಾಂಡ್ಯಪ್ಪರಸನ ಅಳಿಯನಾದ ಲಕ್ಷ್ಮಪ್ಪರಸ ಒಡೆಯನು ಯಿಚಿಲದ ಮಠಕ್ಕೆ ಚಂದ್ರಗ್ರಹಣದ ಸಮಯದಲ್ಲಿ ಬರೆಸಿ ಕೊಟ್ಟಂತಹ ದಾನ ಶಾಸನ ಇದಾಗಿದ್ದು, ಈ ಮಠಕ್ಕೆ ಅಕ್ಕಿಯ ನೈವೇದ್ಯಕ್ಕೆ 33 ಕಾಟಿ ಗದ್ಯಾಣಗಳನ್ನು ಧಾರಾ ಪೂರ್ವಕವಾಗಿ ಕೊಟ್ಟಂತಹ ದಾನವನ್ನು ಈ ಶಾಸನವು ಉಲ್ಲೇಖಿಸುತ್ತದೆ. ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯವನ್ನು ಕಾಣಬಹುದು.
ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ಕಿಶನ್ ಕುಮಾರ್ ಮೂಡುಬೆಳ್ಳೆ ಹಾಗೂ ಸ್ಥಳೀಯರಾದ ಎಸ್. ಲಿಂಗಪ್ಪ ದೋಟ, ಕುಶೇಷ್ ಮತ್ತು ರಮೇಶ್ ಅನ್ನಪಾಡಿ ಅವರು ಸಹಕಾರ ನೀಡಿದರು.
Mangalore 15th century old Monument found in Bantwal the second one in one weeks gap. The Year of installation shows 1405.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
10-07-25 03:24 pm
HK News Desk
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm