ಬ್ರೇಕಿಂಗ್ ನ್ಯೂಸ್
08-09-21 10:46 pm Mangaluru Correspondent ಕರಾವಳಿ
ಮಂಗಳೂರು, ಸೆ.8 : ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಸಂಪೂರ್ಣವಾಗಿ ಎರಡು ತಿಂಗಳ ಕಾಲ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗ್ಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಕೂಡ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಅಲ್ಲದೆ, ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇದ್ಯಾದಿ ಎಲ್ಲ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶ ಮಾಡದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲೀಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Nipah outbreak in Kerala. Karnataka govt issues advisory No entry into kerala for two months order Mangalore DC. The Karnataka government has asked districts bordering Kerala to be extra vigilant. The district authorities have been asked to monitor those arriving from Kerala for symptoms like fever, altered mental status, severe weakness, headache, respiratory distress, cough, vomiting, muscle pain, convulsion and diarrhoea.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm