ಬ್ರೇಕಿಂಗ್ ನ್ಯೂಸ್
15-09-21 05:53 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ವಿಜ್ಞಾನಕ್ಕೆ ಆಂಗ್ಲ ಭಾಷೆ ಅನಿವಾರ್ಯವಲ್ಲ, ಅದೊಂದು ಮನಸ್ಥಿತಿಯಷ್ಟೇ. ವಿಜ್ಞಾನದ ಹೆಚ್ಚಿನ ಆವಿಷ್ಕಾರಗಳು ಆಂಗ್ಲ ಭಾಷೆಯಲ್ಲಿವೆ ಎಂದ ಮಾತ್ರಕ್ಕೆ ಅವನ್ನು ಅದೇ ಭಾಷೆಯಲ್ಲಿ ಕಲಿಸಬೇಕೆಂದಿಲ್ಲ. ಅವೆಲ್ಲವೂ ಮಾತೃಭಾಷೆಯ ಮೂಲಕ ಜನಸಾಮಾನ್ಯರನ್ನು ತಲುಪುವ ಅಗತ್ಯವಿದೆ ಎಂದು ಡಿಆರ್ ಡಿಓ ನಿರ್ದೇಶಕ ಡಾ.ಟಿ.ಎಂ. ಕೊಟ್ರೇಶ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ವಿವಿ ಸಹಯೋಗದಲ್ಲಿ ಸ್ವದೇಶಿ ವಿಜ್ಞಾನ ಆಂದೋಳನ (ಕರ್ನಾಟಕ) ಆಯೋಜಿಸಿರುವ ಮೂರು ದಿನಗಳ 16 ನೇ ಕನ್ನಡ ವಿಜ್ಞಾನ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ಅಭಿಪ್ರಾಯ ಪಟ್ಟಿದ್ದಾರೆ. ಈ ಬಗ್ಗೆ ಅವರು ತಮ್ಮ ವೀಡಿಯೋ ಸಂದೇಶ ಕಳುಹಿಸಿದ್ದು , ನೂತನ ರಾಷ್ಟ್ರೀಯ ಶಿಕ್ಷಣ ಪದ್ಧತಿ ಮಾತೃಭಾಷೆಗೆ ಹೆಚ್ಚಿನ ಒತ್ತು ಕೊಟ್ಟಿರುವುದು ಸ್ವಾಗತಾರ್ಹ. ಕನ್ನಡದಲ್ಲಿ ವಿಜ್ಞಾನ ಬರಹಗಾರರು ಹೆಚ್ಚಬೇಕು. ಅದಕ್ಕೂ ಮಿಗಿಲಾಗಿ ಮಾತೃಭಾಷೆಯಲ್ಲಿ ಹೇಳುವಾಗ ಮಾಹಿತಿ ಸತ್ವ ಕಳೆದುಕೊಳ್ಳಬಾರದು ಎಂಬ ಕಾಳಜಿಯೂ ಇರಬೇಕೆಂದರು.


ಉದ್ಘಾಟನಾ ಬಾಷಣ ನೆರವೇರಿಸಿದ ರಾಮಕೃಷ್ಣ ಮಠದ ಅಧ್ಯಕ್ಷ ಜಿತಕಾಮಾನಂದ ಸ್ವಾಮೀಜಿ, ಭಾರತ ವೈಜ್ಞಾನಿಕವಾಗಿ ಅತ್ಯಂತ ಮುಂದುವರಿದ ದೇಶವಾಗಿತ್ತು ಎಂದು ಉದಾಹರಣೆ ಸಹಿತ ವಿವರಿಸಿದರು. ನಮ್ಮ ದೇಶದಲ್ಲಿ ಬೆರಗು ಮೂಡಿಸುವ ವೈಜ್ಞಾನಿಕ ರಚನೆಗಳಿವೆ. ಅವುಗಳು ಜನಸಾಮಾನ್ಯರಿಗೆ, ಮಕ್ಕಳಿಗೆ ತಿಳಿಯಬೇಕು. ಅವರೂ ನಮ್ಮ ದೇಶದ ಬಗ್ಗೆ ಹೆಮ್ಮೆ ಪಡಬೇಕು. ನಮ್ಮ ಪೂರ್ವಿಕರನ್ನು ಮರೆಯುವುದು ವಿನಾಶಕ್ಕೆ ದಾರಿ ಎಂದು ಎಚ್ಚರಿಸಿದರು.
ಉನ್ನತ ಶಿಕ್ಷಣ, ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಶ್ವಥ್ ನಾರಾಯಣ ತಮ್ಮ ವೀಡಿಯೋ ಸಂದೇಶದಲ್ಲಿ, ವಿಜ್ಞಾನ ನಮ್ಮ ಪರಂಪರೆಯ ಭಾಗ, ಋಷಿ ಮುನಿಗಳು ಧರ್ಮದ ಜೊತೆ ವಿಜ್ಞಾನವನ್ನೂ ಬೆಳೆಸಿದವರು. ಮಾತೃಭಾಷೆಯಲ್ಲಿ ವಿಜ್ಞಾನ ತಲುಪಿಸುವುದು ಬೆಲೆ ಕಟ್ಟಲಾಗದ ಕೊಡುಗೆ. ವಿವಿಧ ವಿಶ್ವವಿದ್ಯಾನಿಲಯ, ಕಾಲೇಜುಗಳಿಗೆ ಈ ಕಾರ್ಯದ ವಿಸ್ತರಣೆಯಾಗಬೇಕು. ಸರ್ಕಾರ ಅಗತ್ಯ ನೆರವು ನೀಡಲು ಸಿದ್ಧವಿದೆ ಎಂಬ ಭರವಸೆ ನೀಡಿದರು.
ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ, ಸ್ವದೇಶಿ ವಿಜ್ಞಾನ ಆಂದೋಲನವನ್ನು ಸ್ಥಾಪಿಸಿದ ಕೆ.ಐ. ವಾಸು ಅವರನ್ನು ನೆನೆದರು. ವಿಜ್ಞಾನ ಮತ್ತು ಆಧ್ಯಾತ್ಮಿಕತೆ ಪರಸ್ಪರ ಬೆಸೆದುಕೊಂಡಿವೆ. ಜೀವಿಸಲು ನಮಗೆ ಎರಡೂ ಮುಖ್ಯ ಎಂದರು.


ಡಾ.ಎಂ. ವಿಶ್ವೇಶ್ವರಯ್ಯ ವಿಜ್ಞಾನ ಪ್ರಶಸ್ತಿ ಪ್ರದಾನ
ಇದೇ ಸಂದರ್ಭದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಏರೋಸ್ಪೇಸ್ ಇಂಜಿನಿಯರಿಂಗ್ ವಿಭಾಗದ ಸಿ.ಓ.ಇ, ಇನ್ ಹೈಪರ್ ಸಾನಿಕ್ಸ್ ಮುಖ್ಯಸ್ಥ ಪ್ರೊ.ಜಿ. ಜಗದೀಶ್ ಅವರಿಗೆ ʼಭಾರತರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯ ವಿಜ್ಞಾನ ಪ್ರಶಸ್ತಿʼ, ಹಿರಿಯ ಸಂಗೀತ ವಿದ್ವಾಂಸ ಸಂಗೀತ ವಿದ್ಯಾನಿಧಿ ಡಾ. ವಿದ್ಯಾಭೂಷಣ ಅವರಿಗೆ ʼಭಾರತರತ್ನ ಡಾ. ಭೀಮಸೇನ್ ಜೋಷಿ ಸಾಂಸ್ಕೃತಿಕ ವಿಜ್ಞಾನ ಪ್ರಶಸ್ತಿʼ ಮತ್ತು ಸಿಐಐಆರ್ ಸಿ ನಿರ್ದೇಶಕ ಡಾ. ಕೃಷ್ಣ ವೆಂಕಟೇಶ್ ಅವರಿಗೆ ʼಭಾರತರತ್ನ ಡಾ. ಸಿ.ಎನ್.ಆರ್ ರಾವ್ ವಿಜ್ಞಾನ ಪ್ರಶಸ್ತಿʼ ನೀಡಿ ಗೌರವಿಸಲಾಯಿತು. ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸರಸ್ವತಿ ಎಸ್. ರಾವ್ ಅವರು ಬರೆದ ʼನಮ್ಮ ಹೆಮ್ಮೆಯ ಭಾರತೀಯ ವಿಜ್ಞಾನಿಗಳುʼ ಮತ್ತು ʼವಿಜ್ಞಾನ ವಿಸ್ಮಯʼ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.
ಸ್ವದೇಶಿ ವಿಜ್ಞಾನ ಆಂದೋಳನ (ಕರ್ನಾಟಕ) ರಾಜ್ಯಾಧ್ಯಕ್ಷ ಕ್ಯಾ. ಗಣೇಶ್ ಕಾರ್ಣಿಕ್ ಅತಿಥಿಗಳನ್ನು ಸ್ವಾಗತಿಸಿದರು. ಆಂದೋಳನದ ಕಾರ್ಯಾಧ್ಯಕ್ಷ ಡಾ. ಸಿ. ರೇಣುಕಾಪ್ರಸಾದ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಚ್, ಕರಾವಳಿ ಜಿಲ್ಲಾ ಘಟಕದ ಮುಖ್ಯಸ್ಥ ಡಾ.ಎಸ್.ಎಂ ಶಿವಪ್ರಕಾಶ್, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿಕೆ, ವಿಜ್ಞಾನ ವಿಭಾಗದ ಡೀನ್ ಡಾ. ಮಂಜುನಾಥ ಪಟ್ಟಾಭಿ ಮೊದಲಾದವರು ಉಪಸ್ಥಿತರಿದ್ದರು. ಕನ್ನಡ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರ್ವಹಿಸಿದರು. ಡಾ. ಸರ್ ಎಂ ವಿಶ್ವೇಶ್ವರಯ್ಯ ಅವರ 161ನೇ ಜನ್ಮದಿನೋತ್ಸವದ ಪ್ರಯುಕ್ತ ಅತಿಥಿಗಳು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕರಾವಳಿ ಚಿತ್ರಕಲಾ ಚಾವಡಿ ಏರ್ಪಡಿಸಿರುವ ಚಿತ್ರಕಲಾ ಪ್ರದರ್ಶನಕ್ಕೆ ಕುಲಪತಿಗಳು ಚಾಲನೆ ನೀಡಿದರು.
Mangalore Science has no language says DRDO kotresh.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm