ಬ್ರೇಕಿಂಗ್ ನ್ಯೂಸ್
29-09-21 10:11 pm Mangalore Correspondent ಕರಾವಳಿ
ಮಂಗಳೂರು, ಸೆ.29: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಅಲೋಪತಿ ಜೊತೆಗೆ ಸಂಯುಕ್ತ ಆಯುಷ್ ಆಸ್ಪತ್ರೆ ಅಧಿಕೃತವಾಗಿ ಆರಂಭಗೊಂಡಿದೆ. ಕೇಂದ್ರ ಸರಕಾರದ ರಾಷ್ಟ್ರೀಯ ಆಯುಷ್ ಮಿಷನ್ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯನ್ನು ಸ್ಥಾಪನೆ ಮಾಡಲಾಗಿದೆ.
2020 ರಲ್ಲಿ ಯೋಜನೆಯ ಕೆಲಸ ಪೂರ್ಣಗೊಂಡಿತ್ತು. ಆದರೆ, ಕೋವಿಡ್ ಲಾಕ್ಡೌನ್ ಕಾರಣದಿಂದಾಗಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ, ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಮಂಗಳೂರಿಗೆ ಆಗಮಿಸಿದ್ದಾಗ ಅಧಿಕೃತವಾಗಿ ಆಯುಷ್ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಾಯಿತು.
ಈಗಾಗಲೇ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗ ಆರಂಭವಾಗಿದ್ದು, ಆಯುಷ್ ಒಳಪಟ್ಟ ಎಲ್ಲ ರೀತಿಯ ಪದ್ಧತಿಗಳಾದ ಆಯುರ್ವೇದ, ಯೋಗ, ಯುನಾನಿ, ಸಿದ್ಧ ಹೋಮಿಯೋಪತಿಗಳ ವಿಶೇಷ ಚಿಕಿತ್ಸಾ ಸೌಲಭ್ಯಗಳು ಆಸ್ಪತ್ರೆಯಲ್ಲಿ ಲಭ್ಯವಿದೆ. ಎಲ್ಲಾ ಆಯುಷ್ ಪದ್ಧತಿಗಳು ಹಾಗೂ ಅಲೋಪತಿ ಸೌಲಭ್ಯಗಳು ಒಂದೇ ಸೂರಿನಡಿ ದೊರೆಯಲಿರುವ ದೇಶದ ಮೊತ್ತಮೊದಲ ಆಸ್ಪತ್ರೆ ಇದಾಗಿದೆ.
ಆಸ್ಪತ್ರೆಯಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿಯ ಪಂಚಕರ್ಮ, ಜಪ, ಕಾರಸವ ಅಭ್ಯಂಗ ಮತ್ತಿತರ ಚಿಕಿತ್ಸೆ ಲಭಿಸಲಿದೆ. ನ್ಯಾಚುರೋಪತಿ ಪದ್ಧತಿಯ ಜಲಚಿಕಿತ್ಸೆ, ಆಕ್ಯೂಪಂಚರ್, ಆಕ್ಯುಪ್ರೆಶರ್, ಕಲರ್ಥೆರಪಿ, ಫಿಸಿಯೋಥೆರಪಿ ಮುಂತಾದ ಚಿಕಿತ್ಸೆಗಳು ಹಾಗೂ ಯುನಾನಿ ಚಿಕಿತ್ಸಾ ಪದ್ಧತಿಯಲ್ಲಿ ಫಲಕ, ಹಿಜಾಮ (ಗಜೆಮಿನಲ್ ಥೆರಪಿ) ಮುಂತಾದ ಆಯುಷ್ ಚಿಕಿತ್ಸಾ ಪದ್ದತಿ ಇರಲಿದೆ.
ಆಸ್ಪತ್ರೆಯ ಮೊದಲ ಮಹಡಿಯಲ್ಲಿ ಆಡಳಿತ ವಿಭಾಗ, ಎರಡನೇ ಮಹಡಿಯಲ್ಲಿ 20 ಹಾಸಿಗೆಗಳ ಜನರಲ್ ವಾರ್ಡ್ ಹಾಗೂ 5 ಸ್ಪೆಷಲ್ ವಾರ್ಡ್ ಮತ್ತು ಪಂಚಕರ್ಮ ಆಯುಷ್ ಥೆರಪಿ ಸೌಲಭ್ಯವಿರುವ ಮಹಿಳಾ ವಿಭಾಗ, ಮೂರನೇ ಮಹಡಿಯಲ್ಲಿ 20 ಹಾಸಿಗೆಗಳ ಜನರಲ್ ವಾರ್ಡ್ ಹಾಗೂ 5 ಸ್ಪೆಷಲ್ ವಾರ್ಡ್ ಹಾಗೂ ಮಾಡ್ಯುಲರ್ ಸೌಲಭ್ಯಗಳಿವೆ.
ಇದರ ಜೊತೆಗೆ ಡಯಟ್ ಕಿಚನ್, ಪಥ್ಯಾಹಾರ ವಿಭಾಗ ಸ್ಪೆಷಾಲಿಟಿ ಕ್ಲಿನಿಕ್ ಸೌಲಭ್ಯಗಳಿವೆ. ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖಾ ವತಿಯಿಂದ ಪ್ರಾರಂಭಿಸಲಾದ ಮಕ್ಕಳಿಲ್ಲದ ದಂಪತಿಗಳಿಗೆ ಸೃಷ್ಟಿ ಯೋಜನೆ ಆರಂಭಿಸಲಾಗಿದೆ. ಅಪೌಷ್ಟಿಕತೆ ನಿವಾರಣೆಗಾಗಿ ಪ್ರಾರಂಭಿಸಲಾದ “ಸಮೃದ್ಧಿ", ಮಕ್ಕಳ ಮಾನಸಿಕ ಬೆಳವಣಿಗೆಗೆ ಮನನಮಿತ್ರ ಯೋಜನೆಗಳು ಲಭ್ಯವಿರಲಿವೆ. ಇವೆಲ್ಲ ಯೋಜನೆಯ ಸದುಪಯೋಗವನ್ನು ಸಾರ್ವಜನಿಕರು ಪಡೆಯಬೇಕೆಂದು ಆಯುಷ್ ಇಲಾಖೆ ಮನವಿ ಮಾಡಿದೆ.
Union Minister for AYUSH Sarbanand Sonowal inagurated AYUSH multi-speciality hospital on the premises of Government Wenlock Hospital. The 50-bed AYUSH hospital was sanctioned in 2016 and has been built at a cost of Rs 9 crore. The construction was completed in 2020. It has OPD, pharmacy, laboratory, and treatment sections on the ground floor. The administrative section is on the first floor. The second floor has 20-bed general ward and five special wards with panchakarma women section.
24-04-25 04:56 pm
HK News Desk
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
24-04-25 04:59 pm
HK News Desk
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
Pahalgam terror attack, Pakistani terrorists:...
23-04-25 09:25 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm