ಬ್ರೇಕಿಂಗ್ ನ್ಯೂಸ್
06-10-21 02:32 pm Mangaluru Correspondent ಕರಾವಳಿ
ಉಳ್ಳಾಲ, ಅ.6: ರಾಜ್ಯ, ರಾಷ್ಟ್ರ ಮಟ್ಟದ ನಾಯಕರು ಸೆಕ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಮಾಧ್ಯಮದಲ್ಲಿ ಸದ್ದು ಮಾಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪಂಚಾಯತ್ ಕಚೇರಿಯಲ್ಲಿ ಹಿರಿಯ ಸದಸ್ಯನೊಬ್ಬನ ರಾಸಲೀಲೆಯ ಸುದ್ದಿ ಜಾಲತಾಣಗಳಲ್ಲಿ ಸದ್ದು ಮಾಡಿದೆ.
ಮುನ್ನೂರು ಗ್ರಾಮ ಪಂಚಾಯತ್ ಕಚೇರಿಯ ಬಿಜೆಪಿ ಬೆಂಬಲಿತ, 75ರ ಹರೆಯದ ಹಿರಿಯ ಸದಸ್ಯರೊಬ್ಬರು ಗ್ರಾಮ ಪಂಚಾಯತ್ ಅಧ್ಯಕ್ಷರ ಕೊಠಡಿಯಲ್ಲೇ ಬಡ ಮಹಿಳೆಯನ್ನು ತಮ್ಮ ಕಾಮಚೇಷ್ಟೆಗೆ ಬಳಸಿಕೊಂಡಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಕಚೇರಿ ಒಳಗಡೆ ಸಿಸಿಟಿವಿ ಇರುವ ಬಗ್ಗೆ ಮಾಹಿತಿ ತಿಳಿಯದೆ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾನೆ ಎನ್ನಲಾಗುತ್ತಿದ್ದು, ಹತ್ತು ದಿನಗಳ ಹಿಂದೆ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಿವೇಶನಕ್ಕೆ ಅರ್ಜಿ ಸಲ್ಲಿಸಲು ಬಂದಿದ್ದ ಬಡ ಮಹಿಳೆಯನ್ನು 75 ವರ್ಷದ ಹಿರಿಯ ಸದಸ್ಯ, ಪಂಚಾಯತ್ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಅವರ ಕೊಠಡಿಯಲ್ಲಿ ಕುಳ್ಳಿರಿಸಿ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಮುದುಕನ ರಾಸಲೀಲೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಈ ಬಗ್ಗೆ ವಿಷಯ ತಿಳಿದ ಪಂಚಾಯತ್ ಅಧಿಕಾರಿಗಳು ಅಧ್ಯಕ್ಷ ವಿಲ್ಫೆಡ್ ಡಿಸೋಜ ಗಮನಕ್ಕೆ ತಂದಿದ್ದಾರೆ. ಮಹಿಳೆ ತನ್ನ ಮಕ್ಕಳೊಂದಿಗೆ ಪಂಚಾಯತ್ ಕಚೇರಿಗೆ ಬಂದಿದ್ದ ವೇಳೆ ಮಕ್ಕಳನ್ನು ಹೊರಗೆ ನಿಲ್ಲಿಸಿ, ಪಂಚಾಯತ್ ಅಧ್ಯಕ್ಷರ ಕಚೇರಿ ಒಳಗೆ ತೆರಳಿದ್ದರು. ಈ ವೇಳೆ, ಒಳಗಿದ್ದ ಹಿರಿಯ ಸದಸ್ಯ ಬಾಗಿಲು ಮುಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗುತ್ತಿದೆ.
ಘಟನೆ ನಡೆದಿರುವುದು ದೃಢಪಟ್ಟಿದ್ದರೂ, ಪಂಚಾಯತ್ ಅಧಿಕಾರಿಗಳು ಈ ಬಗ್ಗೆ ಪೊಲೀಸ್ ದೂರು ನೀಡಿಲ್ಲ. ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ವಿಷಯ ತಿಳಿದ ಗ್ರಾಮದ ಕೆಲವು ನಿವಾಸಿಗಳು ಮತ್ತು ಡಿವೈಎಫ್ಐ ಸದಸ್ಯರು ಜಾಲತಾಣದಲ್ಲಿ ಗ್ರಾಪಂ ಸದಸ್ಯನ ಫೋಟೋ ಹಾಕಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡ ಮಹಿಳೆಯನ್ನು ಪುಸಲಾಯಿಸಿ, ತಮ್ಮ ಕಾಮತೀಟೆ ತೀರಿಸಿಕೊಳ್ಳಲು ಸರಕಾರಿ ಕಚೇರಿಯನ್ನು ಬಳಸಿಕೊಂಡಿದ್ದು ಅಕ್ಷಮ್ಯ. ಈ ರೀತಿಯ ಗ್ರಾಮ ಸದಸ್ಯನನ್ನು ಪಂಚಾಯತ್ ಸದಸ್ಯತ್ವದಿಂದ ತೆಗೆದು ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮುನ್ನೂರು ಗ್ರಾಪಂ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ ಬಳಿ ಕೇಳಿದರೆ, ರಾಸಲೀಲೆ ಪ್ರಕರಣ ನಡೆದಿರುವುದು ಹೌದೆಂದು ತಿಳಿಸಿದ್ದಾರೆ. ಶುಕ್ರವಾರ ಈ ಬಗ್ಗೆ ಪಂಚಾಯತ್ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಆರೋಪಿಯ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ, ಆರೋಪಿ ಗ್ರಾಮ ಪಂಚಾಯತ್ ಸದಸ್ಯನನ್ನು ಉಚ್ಛಾಟಿಸಬೇಕೆಂದು ಒತ್ತಾಯಿಸಿ ಉಳ್ಳಾಲದ ಡಿವೈಎಫ್ಐ ನಿಯೋಗವು ಪಂಚಾಯತ್ ಅಧ್ಯಕ್ಷರಿಗೆ ಮನವಿ ನೀಡಿದೆ.
Mangalore Ullal, Munnur Grama Panchayath member, the 75-year-old man was caught in a sex scandal with a woman inside President's office. The incident has been recorded on a CCTV camera.
24-04-25 04:56 pm
HK News Desk
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
24-04-25 04:59 pm
HK News Desk
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
Pahalgam terror attack, Pakistani terrorists:...
23-04-25 09:25 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm