ಬ್ರೇಕಿಂಗ್ ನ್ಯೂಸ್
23-10-21 09:28 pm Mangalore Reporter ಕರಾವಳಿ
ಮಂಗಳೂರು, ಅ.23 : ಬಲ್ಮಠ ಥಿಯೋಲಾಜಿಕಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಸಾಹಿತ್ಯ, ಸಂಗೀತ, ನಾಟಕ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದ ಡಾ.ಹನಿಬಾಲ್ ಕಬ್ರಾಲ್(66) ನಿಧನರಾಗಿದ್ದಾರೆ. ಅವರು ಪತ್ನಿ ಶಾಲಿನಿ ಕಬ್ರಾಲ್ ಮತ್ತು ಒಬ್ಬಳು ಪುತ್ರಿ ಹಾಗೂ ಇಬ್ಬ ಪುತ್ರನನ್ನು ಅಗಲಿದ್ದಾರೆ.
ಮಂಗಳೂರು ಮೂಲದವರೇ ಆಗಿರುವ ಡಾ.ಕಬ್ರಾಲ್, ಬಲ್ಮಠದ ಥಿಯೋಲಾಜಿಕಲ್ ಕಾಲೇಜಿನಲ್ಲಿಯೇ ಪದವಿ ಪಡೆದು 1976ರಲ್ಲಿ ಸೊಸೈಟಿಯ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಆಬಳಿಕ ಬೆಂಗಳೂರಿನ ಯುನೈಟೆಡ್ ಥಿಯೋಲಾಜಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡಿದ್ದರು. 1993ರಲ್ಲಿ ಅಮೆರಿಕದ ಪ್ರಿನ್ಸ್ ಟನ್ ಯುನಿವರ್ಸಿಟಿಯಲ್ಲೂ ಅಧ್ಯಯನ ಕೈಗೊಂಡಿದ್ದ ಹನಿಬಾಲ್, ಪಶ್ಚಿಮ ಬಂಗಾಳದ ಸೀರಂಪೂರ್ ಯುನಿವರ್ಸಿಟಿಯಲ್ಲಿ ಡಾಕ್ಟರೇಟ್ ಪದವಿ ಗಳಿಸಿದ್ದರು.
ಮಂಗಳೂರಿನ ಕರ್ನಾಟಕದ ಥಿಯೋಲಾಜಿಕಲ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದ ಹನಿಬಾಲ್ ಕಬ್ರಾಲ್ 2009ರಲ್ಲಿ ಕಾಲೇಜಿನ ಪ್ರಾಂಶುಪಾಲ ಹುದ್ದೆಗೇರಿದ್ದರು. ಇದೇ ವೇಳೆ, ಕಲಾಸಂಗಮ ಎನ್ನುವ ರೆಕಾರ್ಡಿಂಗ್ ಸ್ಟುಡಿಯೋದ ಡೈರೆಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದರು. ಇದರ ನಡುವೆ, ಸಂಗೀತ, ಕಲೆ, ನಾಟಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಕೈಯಾಡಿಸಿ ಮೆಚ್ಚುಗೆ ಗಳಿಸಿದ್ದರು. ಅತ್ಯಂತ ಸ್ನೇಹಜೀವಿಯಾಗಿದ್ದ ಹನಿಬಾಲ್, ಥಿಯೋಲಾಜಿಕಲ್ ಕಾಲೇಜಿಗೆ ಬರುವ ಎಲ್ಲರ ಜೊತೆಗೂ ಆತ್ಮೀಯತೆಯಿಂದ ತೊಡಗಿಸಿಕೊಳ್ಳುತ್ತಿದ್ದರು.
ಕನ್ನಡ, ತುಳು, ಇಂಗ್ಲಿಷ್, ಹಿಂದಿ ಹೀಗೆ 500 ಹೆಚ್ಚು ಹಾಡುಗಳಿಗೆ ಸಂಗೀತ ಒದಗಿಸಿ, ಸ್ವತಃ ಕಂಪೋಸ್ ಮಾಡಿದ್ದು ಅವರ ದೊಡ್ಡ ಸಾಧನೆ. ಮಿಶನರಿಗಳು ಮತ್ತು ಕರ್ನಾಟಕ ಸಂಗೀತ ಕ್ಷೇತ್ರದ ಬಗ್ಗೆ ಅಧ್ಯಯನ ಕೈಗೊಂಡು ಹಲವಾರು ಸಾಹಿತ್ಯ, ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದರು.
Former principal of Karnataka Theological College and Retired Secretary KACES Rev Dr Hannibal Richard Cabral passed away on October 23. He was 66. Rev Dr Hannibal Richard Cabral was born on 25 June 1955, to Late Percy Cabral and late Manorama Cabral from Mangaluru. Dr Hannibal Cabral was the husband of Shailini Cabral, Father of Rachitha Cabral and Vineeth Cabral and grandfather of Larisa and Rayden Cabral.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm